BREAKING NEWS

ಕೆಜಿಎಫ್‌ ಬಾಬು ಮನೆ ಮೇಲೆ ಐಟಿ ದಾಳಿ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಮುನ್ನ ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬುಧವಾರ ಬೆಳ್ಳಂಬೆಳಗ್ಗೆ ಕೆಜಿಎಫ್‌ ಬಾಬುಗೆ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಹೈಗ್ರೌಂಡ್ಸ್‌ ಬಳಿಯಿರುವ ಕೆಜಿಎಫ್‌ ಬಾಬು ನಿವಾಸದ ಮೇಲೆ ದಾಳಿ ನಡೆಸಿರುವಖಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಜಿಎಫ್‌ ಬಾಬುಗೆ ಸೇರಿದ ರಕ್ಸಾನಾ ಪ್ಯಾಲೇಸ್‌ ಹಾಗೂ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬುಧವಾರ ಬೆಳಗ್ಗೆಯಿಂದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನೆಲೆ ಐಟಿ ಅಧಿಕಾರಿಗಳು ಕೆಜಿಎಫ್ ಬಾಬು ಸೇರಿ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜಧಾನಿ ಬೆಂಗಳೂರಿನ 50 ಕಡೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ.
ಈ ಹಿಂದೆಯೂ ಕೂಡ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆದಾಯ ತೆರಿಗೆ ವಂಚನೆಯಡಿ, ಕಳೆದ ವರ್ಷ ಮೇ 28ರಂದು ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು. ಕೆಜಿಎಫ್ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಹಾಗೂ ಕಚೇರಿಯ ಮೇಲೂ ದಾಳಿ ನಡೆಸಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದರು. ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕೆಜಿಎಫ್‌ ಬಾಬು 1741 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದರು.

ಬಡವರಾಗಿಯೇ ಇದ್ದುಬಿಡಿ ಎಂದಿದ್ದ ಕೆಜಿಎಫ್‌ ಬಾಬು : ಈ ಹಿಂದೆ ಐಟಿ ಮತ್ತು ಇಡಿ ದಾಳಿಗೆ ಸಂಬಂಧಿಸಿದಂತೆ ಮಾತನಾಡಿದ್ದ ಕೆಜಿಎಫ್‌ ಬಾಬು ಬಡವರು ಬಡವರಾಗಿಯೇ ಇದ್ದುಬಿಡಿ. ಶ್ರೀಮಂತರಾದರೆ ಐಟಿ, ಇಡಿ, ಸಿಬಿಐ ದಾಳಿ ಭಯ ಇರುತ್ತದೆ ಎಂದು ಹೇಳಿದ್ದರು. ಬಡವನೊಬ್ಬ ಶ್ರಮವಹಿಸಿ ದುಡಿದು ಕಾನೂನು ಬದ್ಧವಾಗಿಯೇ ಶ್ರೀಮಂತನಾದರೂ ದೇಶದ ತನಿಖಾ ಸಂಸ್ಥೆಗಳು ವಿಚಾರಣೆ ಹೆಸರಿನಲ್ಲಿ ಮಾನಸಿಕ ಕಿರುಕುಳ ನೀಡುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

1,621 ಕೋಟಿ ರೂ. ಆಸ್ತಿ ಒಡೆಯ ಕೆಜಿಎಫ್‌ ಬಾಬು : ಕೆಜಿಎಫ್‌ ಬಾಬು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಭಾರೀ ತಯಾರಿ ನಡೆಸಿದ್ದರು. ಆದರೆ, ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಿತ್ತು. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಅವರ ಪತ್ನಿ ಶಾಝಿಯಾ ತರನ್ನುಮ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಈ ವೇಳೆ ಅವರು ತಮ್ಮ ಹಾಗೂ ತಮ್ಮ ಪತಿ ಕೆಜಿಎಫ್‌ ಬಾಬು ಅವರ ಆಸ್ತಿ ವಿವರ ಘೋಷಿಸಿದ್ದು, ಅವರ ಬಳಿ 1,621 ಕೋಟಿ ರೂ. ಆಸ್ತಿ ಇದೆ ಎಂಬುದು ಬಹಿರಂಗವಾಗಿದೆ. ಕೆಜಿಎಫ್‌ ಬಾಬು ಹೆಸರಿನಲ್ಲಿ 83.56 ಕೋಟಿ ರೂ.ಗಳ ಚರಾಸ್ತಿ ಇದ್ದು, 1,538.15 ಕೋಟಿ ರೂ. ಬೆಲೆ ಬಾಳುವ ಸ್ಥಿರಾಸ್ತಿಗಳಿವೆ ಎಂದು ಅಫಿಡವಿಟ್‌ನಲ್ಲಿ ಘೋಷಿಸಲಾಗಿದೆ.

lokesh

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

2 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

2 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

8 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

8 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

8 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

8 hours ago