Mysore
23
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

ನಾಳೆ ಮದ್ಯಾಹ್ನದೊಳಗೆ ಜಾ.ದಳದ ಎರಡನೇ ಪಟ್ಟಿ ಬಿಡುಗಡೆ: ಕುಮಾರಸ್ವಾಮಿ

ಕಲಬುರಗಿ: ಜನತಾ ಪರಿವಾರದಿಂದ ಬೇರೆ ಬೇರೆ ಪಕ್ಷಕ್ಕೆ ವಲಸೆ ಹೋಗಿದ್ದ ಬಹಳಷ್ಟು ಮುಖಂಡರು ಜೆಡಿಎಸ್‍ಗೆ ಮರಳುವ ಬಗ್ಗೆ ಚರ್ಚೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ಬಹಳಷ್ಟು ಮುಖಂಡರು ಜೆಡಿಎಸ್‍ಗೆ ಸೇರ್ಪಡೆ ಆಗುತ್ತಾರೆ. ಇಷ್ಟು ದಿನ ಜೆಡಿಎಸ್‍ಗೆ ಶಾಕ್ ಅಂದವರಿಗೆ ಈಗ ಶಾಕ್ ಆಗುತ್ತಿದೆ. ನಮಗೆ ಯಾವುದೂ ಶಾಕ್ ಇಲ್ಲ. ಹಲವರು ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಎಂದರು.

ಜೇವರ್ಗಿ ಕ್ಷೇತ್ರದಲ್ಲಿ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಅವರು ಸೇರ್ಪಡೆಯಾಗುವುದು ಅಂತಿಮವಾಗಿದೆ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಇಲ್ಲ ಎಂದು ಹೇಳುತ್ತಿದ್ದರು. ಆದರೆ ಈಗ ಉತ್ತರ ಕರ್ನಾಟಕದಲ್ಲಿ 30 ರಿಂದ 40 ಕ್ಷೇತ್ರಗಳಲ್ಲಿ ಗೆಲ್ಲುವ ವಾತಾವರಣ ನಿರ್ಮಾಣ ಆಗಿದೆ ಎಂದು ಹೇಳಿದರು.

ಮಾಜಿ ಶಾಸಕ ವೈಎಸ್‍ವಿ ದತ್ತ ಅವರು ಈಗ ನನ್ನ ಸಂಪರ್ಕದಲ್ಲಿ ಇಲ್ಲ. ದತ್ತ ಶಾಸಕರಾಗಿದ್ದಾಗಲೂ ನನ್ನ ಜೊತೆ ಸಂಪರ್ಕದಲ್ಲಿ ಇರಲಿಲ್ಲ. ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರ ಜೊತೆ ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.

ನಾಳೆ ಎರಡನೇ ಪಟ್ಟಿ ಬಿಡುಗಡೆ: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಾಳೆ ಮಧ್ಯಾಹ್ನದ ಒಳಗೆ ಪ್ರಕಟಿಸಲಾಗುವುದು. ಪಟ್ಟಿ ಬಿಡುಗಡೆಗೆ ಸಿದ್ಧವಾಗಿದೆ. ಹಾಸನ ಕ್ಷೇತ್ರದ ಟಿಕೆಟ್ ವಿಚಾರದ ಬಗ್ಗೆ ತೆಲೆ ಕೆಡಿಸಿಕೊಳ್ಳಬೇಡಿ. ಹಾಸನದ ಗೊಂದಲವನ್ನು ಬಗೆಹರಿಸೋಣ ಬಿಡಿ. ನನ್ನ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪಂಚರತ್ನ ರಥಯಾತ್ರೆಯಲ್ಲಿ ಏಳೆಂಟು ಕ್ಷೇತ್ರಗಳ ಅಭ್ಯರ್ಥಿಗಳು ಸರಿಯಾಗಿ ಕೆಲಸ ಮಾಡಿಲ್ಲ. ಈ ಬಾರಿಯ ಚುನಾವಣೆಯಲ್ಲಿ 120 ಕ್ಷೇತ್ರಗಳಲ್ಲಿ ಗೆಲ್ಲಬೇಕು. ಅದಕ್ಕಾಗಿ ಶ್ರಮ ಹಾಕುತ್ತಿದ್ದೇವೆ ಎಂದರು.

ಕಾಂಗ್ರೆಸ್ ಅಕಾರಕ್ಕೆ ಬಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಖರ್ಗೆ ಅವರನ್ನು ಅವಕಾಶ ಸಿಕ್ಕಾಗಲೇ ಮುಖ್ಯಮಂತ್ರಿ ಮಾಡಲಿಲ್ಲ. ಮೈತ್ರಿ ಸರ್ಕಾರ ರಚನೆಯಾಗುವಾಗ ಖರ್ಗೆಯವರನ್ನೇ ಮುಖ್ಯಮಂತ್ರಿ ಮಾಡಿ ಎಂದು ದೇವೇಗೌಡರು ಹೇಳಿದ್ದರು.ಆಗ ಅವಕಾಶ ಸಿಕ್ಕಾಗ ಮಾಡಲಿಲ್ಲ. ಈಗ ಮಾಡುತ್ತಾರೆ ಅಂದರೆ ಏನರ್ಥ? ಎಂದು ಕುಟುಕಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ