ರಾಜ್ಯದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಬಿಜೆಪಿಗೆ ಮರಳಿದ್ದಾರೆ. ಅಮಿತ್ ಶಾ ನಡೆಸಿದ ಮಾತುಕತೆ ನಡೆಸಿದ್ದು, ಘರ್ ವಾಪ್ಸಿ ಯಶಸ್ವಿಯಾಗಿದೆ.
ದೆಹಲಿ ಬಿಜೆಪಿ ಕಚೇರಿಯಲ್ಲಿ ಕೇಂದ್ರ ನಾಯಕರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ್ದಾರೆ. ಜಗದೀಶ್ ಶೆಟ್ಟರ್‌ಗೆ ಹಾರ ಹಾಕಿ, ಶಾಲು ಹೊದಿಸಿ ಪಕ್ಷಕ್ಕೆ ಬಿಜೆಪಿಯ ಹಲವು ನಾಯಕರು ಬರಮಾಡಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜೀವ್ ಚಂದ್ರಶೇಖರ್, ಭುಪೇಂದ್ರ ಕುಮಾರ್ ಹಾಗೂ ಬಿವೈ ವಿಜಯೇಂದ್ರ ಸೇರಿ ಇನ್ನೂ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇನ್ನು ಕಾಂಗ್ರೆಸ್ ಎಂಎಸ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ್ದಾರೆ.