ಹುಬ್ಬಳ್ಳಿ: ಬಿಜೆಪಿ ಟಿಕೆಟ್ ವಂಚಿತ ಶಾಸಕ ಜಗದೀಶ ಶೆಟ್ಟರ್ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಖಚಿತಪಡಿಸಿಲ್ಲ.
ಶಾಸಕ ಸ್ಥಾನಕ್ಕೆ ಶಿರಸಿಯಲ್ಲಿ ರಾಜೀನಾಮೆ ಸಲ್ಲಿಸಿ ಹುಬ್ಬಳ್ಳಿಗೆ ವಾಪಸ್ಸಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ತೆರಳಿದ ಬಳಿಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದರ ಬಗ್ಗೆ ಮತ್ತು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದರು.
ಕಡೆ ಗಳಿಗೆಯಲ್ಲಿ ನನಗೆ ಕರೆ ಮಾಡಿದ್ದ ಪಕ್ಷದ ವರಿಷ್ಠರು ರಾಜ್ಯಸಭಾ ಸ್ಥಾನಕ್ಕೆ ಆಯ್ಕೆ ಮಾಡುವುದಾಗಿ ಹೇಳಿದ್ದರು. ಆರು ಸಲ ಶಾಸಕನಾದವನು ರಾಜ್ಯಸಭಾ ಸದಸ್ಯನಾಗಿ ಮೂಲೆಯಲ್ಲಿ ಕೂರಲು ಸಾಧ್ಯವೇ? ಒಂದು ಟಿಕೆಟ್ ಕೊಡಲು ಇಷ್ಟೆಲ್ಲಾ ಸತಾಯಿಸುತ್ತಿರುವುದು ನೋವು ತಂದಿದೆ. ನಾನು ಚುನಾವಣೆಗೆ ಸ್ಪರ್ಧಿಸುವುದಂತೂ ಖಚಿತ. ಪಕ್ಷೇತರವೋ ಅಥವಾ ಕಾಂಗ್ರೆಸ್ ನಿಂದಲೋ ಎಂಬುದನ್ನು ಬೆಂಗಳೂರಿನಲ್ಲಿ ತಿಳಿಸುವೆ ಎಂದು ಹೇಳಿದರು.
ಎಷ್ಟು ದಿನ ಹಿಡಿದಿಟ್ಟುಕೊಳ್ಳಲು ಸಾಧ್ಯ: ಶೆಟ್ಟರ್ ಅವರು ಶಿರಸಿಗೆ ತೆರಳಿದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಶೆಟ್ಟರ್ ಬೆಂಬಲಿಗರ ಜೊತೆ ಸಭೆ ನಡೆಸಿ ಎಚ್ಚರಿಕೆ ನೀಡಿರುವುದೆರ ಕುರಿತು ಪ್ರತಿಕ್ರಿಯಿಸಿದ ಅವರು, ಅವರೆಲ್ಲರೂ ನಾನು ಬೆಳೆಸಿದ ಹುಡುಗರು. ದೈಹಿಕವಾಗಿ ಹಿಡಿದಿಟ್ಟುಕೊಳ್ಳಬಹುದೇ ಹೊರತು ಮಾನಸಿಕವಾಗಿ ಅಲ್ಲ. ಆದರೂ, ಎಷ್ಟು ದಿನ ಹಿಡಿದಿಟ್ಟುಕೊಳ್ಳಲು ಸಾಧ್ಯ ಎಂದರು. ನಂತರ ಬೆಂಗಳೂರಿಗೆ ಹೊರಟರು.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಇಂದಿನಿಂದ ( ಡಿಸೆಂಬರ್ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…