ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಸೇರ್ಪಡೆ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿ ಫಾರಂ ನೀಡಿದ್ದಾರೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಕಚೇರಿಯಲ್ಲಿ ಬಿ ಫಾರಂ ನೀಡಲಾಗಿದೆ.
ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನ ಬಾವುಟ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಗೆ ಬರ ಮಾಡಿಕೊಂಡರು.
ಈ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಜೊತೆ ಹಲವು ನಾಯಕರು ಬರುತ್ತಿದ್ದಾರೆ. ನಮ್ಮ ಪಕ್ಷದ ನೀತಿ ಒಪ್ಪಿಕೊಂಡು ಬರುತ್ತಿದ್ದಾರೆ. ಜಗದೀಶ್ ಶೆಟ್ಟರ್ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಗೆ ಶಕ್ತಿ ಬರಲಿದೆ. ಅವರು ಸರಳ ಸಜ್ಜನೀಯ ರಾಜಕಾರಣಿಯಾಗಿದ್ದಾರೆ.ಹೀಗಾಗಿ ಅವರನ್ನು ಪಕ್ಷಕ್ಕೆ ಸ್ವಾಗತ ಕೋರುತ್ತೇನೆ ಎಂದು ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…
ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…
ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…