ಬೆಂಗಳೂರು: ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ಇಂದು ಬುಧವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಆದರೆ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಆದರೆ ಇದೀಗ ಸರ್ಕಾರ ಸಿಐಡಿ ತನಿಖೆಗೆ ನೀಡಲು ನಿರ್ಧಾರ ಮಾಡಿದೆ ಎಂದು ತಿಳಿಸಿದರು.
ನಡೆದ ಘಟನೆಯೇನು?: ಕಳೆದ ಜುಲೈ 6ರಂದು ಬೆಳಗ್ಗೆಯಿಂದ ನಂದಿ ಕಾಮಕುಮಾರ ಸ್ವಾಮಿಗಳು ಆಶ್ರಮದಲ್ಲಿ ಕಾಣಸಿಗಲಿಲ್ಲ. ಆಗ ಆತಂಕಗೊಂಡ ಭಕ್ತರು ಎಲ್ಲ ಕಡೆ ಹುಡುಕಿದರೂ ಮುನಿಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಚಿಕ್ಕೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಶುಕ್ರವಾರ ರಾತ್ರಿ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್‌ವೆಲ್‌ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು. ಹೀಗಾಗಿ ಪೊಲೀಸರು ರಾತ್ರಿಯಿಂದಲೇ ಕಾರಾರಯಚರಣೆ ಆರಂಭಿಸಿದ್ದರು. ಜೈನ ಮುನಿಗಳ ದೇಹದ ತುಂಡುಗಳನ್ನು ಬಟ್ಟೆಯಲ್ಲಿ ಕಟ್ಟಿ ತೆರೆದ ಕೊಳವೆ ಬಾವಿಯಲ್ಲಿ ಆರೋಪಿಗಳು ಎಸೆದಿದ್ದರು. 20 ಅಡಿ ಆಳದಲ್ಲಿ ಶವದ ಭಾಗಗಳು ಪತ್ತೆಯಾಗಿತ್ತು.
ಹಣಕಾಸು ವ್ಯವಹಾರ: ಆರಂಭದಲ್ಲಿ ಹಣಕಾಸಿನ ವ್ಯವಹಾರಕ್ಕಾಗಿ ಜೈನ ಮುನಿಗಳ ಕೊಲೆ ಮಾಡಲಾಗಿದೆ ಎನ್ನಲಾಗಿತ್ತು. ಕೊಲೆ ಆರೋಪದಲ್ಲಿ ಹಿರೇಕೋಡಿ ಗ್ರಾಮದ ನಾರಾಯಣ ಮಾಳಿ ಮತ್ತು ಹುಸೇನ್ ಡಾಲಾಯತ ಎಂಬುವವರನ್ನು ಬಂಧಿಸಲಾಗಿದೆ. ಕೊಲೆ ಆರೋಪಿ ಮುನಿಗಳಿಂದ ಹಣ ಪಡೆದಿದ್ದ. ಹಣ ಮರಳಿಸುವಂತೆ ಮುನಿಗಳು ಕೇಳಿದ್ದರಿಂದ ಕೊಲೆ ಮಾಡಲಾಗಿದೆ ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಹೇಳಿದ್ದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…