Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಜಮ್ಮು ಮತ್ತು ಕಾಶ್ಮೀರ: ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಪೊಲೀಸರು ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ‘ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್‌ನಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಿಂದ ನಮ್ಮ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ’ ಎಂದಿದ್ದಾರೆ.

ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನಿಯೋಜನೆಗೊಂಡಿದ್ದ ಪಡೆಗಳು ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿವೆ. ಈ ವೇಳೆ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಸದ್ಯ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆ ತಿಳಿಸಿದೆ.

ಕಳೆದ ವಾರವೂ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಗೆ (ಎಲ್‌ಒಸಿ) ಸಮೀಪವಿರುವ ಜಮ್‌ಗುಂಡ್ ಕೆರಾನ್‌ನಲ್ಲಿ ಇಂತದ್ದೇ ಪ್ರಯತ್ನವನ್ನು ಭದ್ರತಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಡೆದಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ