ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಪೊಲೀಸರು ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ‘ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್‌ನಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಿಂದ ನಮ್ಮ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ’ ಎಂದಿದ್ದಾರೆ.
ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನಿಯೋಜನೆಗೊಂಡಿದ್ದ ಪಡೆಗಳು ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿವೆ. ಈ ವೇಳೆ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಸದ್ಯ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆ ತಿಳಿಸಿದೆ.
ಕಳೆದ ವಾರವೂ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಗೆ (ಎಲ್‌ಒಸಿ) ಸಮೀಪವಿರುವ ಜಮ್‌ಗುಂಡ್ ಕೆರಾನ್‌ನಲ್ಲಿ ಇಂತದ್ದೇ ಪ್ರಯತ್ನವನ್ನು ಭದ್ರತಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಡೆದಿವೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…