Mysore
20
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಜಮ್ಮು ಕಾಶ್ಮೀರ ಮುಸ್ಲಿಂ ಲೀಗ್ ನಿಷೇಧ ಹೇರಿದ ಕೇಂದ್ರ ಸರ್ಕಾರ

ನವದೆಹಲಿ : ‘ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ’ ಹೆಸರಿನ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ  ಕಾಯ್ದೆಯಡಿಯಲ್ಲಿ ಪಟ್ಟಿ ಮಾಡಿ, ನಿಷೇಧ ಹೇರಲಾಗಿದೆ.

ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರವನ್ನು ಕಾನೂನುಬಾಹಿರ ಸಂಘ’ ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಬುಧವಾರ ಘೋಷಿಸಿದ್ದಾರೆ.

“ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾರೆ ಮತ್ತು ಜಮ್ಮು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಿದ್ದಾರೆ” ಎಂದು ಕೇಂದ್ರ ಸಚಿವ ಅಮಿತ್ ಶಾ ಅವರು ಹೇಳಿದರು.

“ನಮ್ಮ ರಾಷ್ಟ್ರದ ಏಕತೆ, ಸಾರ್ವಭೌಮತೆ ಮತ್ತು ಸಮಗ್ರತೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಯಾರನ್ನೂ ಉಳಿಸಲಾಗುವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಂದೇಶವು ಜೋರಾಗಿದೆ ಮತ್ತು ಸ್ಪಷ್ಟವಾಗಿದೆ” ಎಂದು ಗೃಹ ಸಚಿವರು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!