ನವದೆಹಲಿ: ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 59ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ಮೋದಿ ,ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶನಿವಾರ ಶ್ರದ್ಧಾಂಜಲಿ ಸಲ್ಲಿಸಿದರು.
ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಪುಷ್ಪನಮನ ಸಲ್ಲಿಸಿದರು.
ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಜವಾಹರಲಾಲ್ ನೆಹರು ಅವರ ಕೊಡುಗೆಯಿಲ್ಲದೆ 21 ನೇ ಶತಮಾನದ ಭಾರತವನ್ನು ಕಲ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಪ್ರಜಾಪ್ರಭುತ್ವದ ನಿರ್ಭೀತ ಕಾವಲುಗಾರರಾಗಿದ್ದ ಅವರ ಪ್ರಗತಿಪರ ಆಲೋಚನೆಗಳು ಸವಾಲುಗಳ ನಡುವೆಯೂ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಬಲವಾಗಿ ಮುನ್ನಡೆಸಿದವು. ನೆಹರೂ ಅವರಿಗೆ ನನ್ನ ನಮನಗಳು ಎಂದು ಹೇಳಿದ್ದಾರೆ.
ಇನ್ನು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ, ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು ಎಂದು ಹೇಳಿದ್ದಾರೆ.
ಹಲವು ಪಕ್ಷದ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
1889 ರಲ್ಲಿ ಜನಿಸಿದ ನೆಹರೂ ಅವರು ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನ ಮಂತ್ರಿಯಾಗಿ ಉಳಿದಿದ್ದಾರೆ. ಅವರು ಆಗಸ್ಟ್ 1947 ಮತ್ತು ಮೇ 1964 ರ ನಡುವೆ ಪ್ರಧಾನಿಯಾಗಿದ್ದರು. ಮೇ 27, 1964 ರಂದು ನಿಧನರಾದರು.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…