ಮಂಗಳೂರು : ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಬಾರಿಯೂ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡುತ್ತೇನೆ. ಬಿ.ಕೆ.ಹರಿಪ್ರಸಾದ್ ವಿಚಾರ ಶಿಸ್ತು ಕಮಿಟಿ ಮುಂದೆ ಇದೆ. ಅವರಿಗೆ ನೊಟೀಸ್ ಕೊಟ್ಟು ಇದರ ಬಗ್ಗೆ ಸಮಿತಿ ನೋಡಿಕೊಳ್ಳುತ್ತದೆ ಎಂದರು.
ಮೂರು ಡಿಸಿಎಂ ಪಕ್ಷದ ಅಭಿಪ್ರಾಯ ಅಲ್ಲ, ಕೆಲವರ ವೈಯಕ್ತಿಕ ಅಭಿಪ್ರಾಯ. ನಮ್ಮ ಪಕ್ಷ ಬಲಿಷ್ಠವಾಗಿದೆ, ಅದರೆ ಕೆಲವರು ಪಕ್ಷ ಗಟ್ಟಿ ಮಾಡಲು ಹೇಳುತ್ತಾರೆ. ಅವರ ಸಲಹೆ ಸೂಚನೆಗಳನ್ನೂ ನಾವು ಕೇಳುತ್ತೇವೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಆದರೆ ಸದ್ಯಕ್ಕೆ ಮೂರು ಡಿಸಿಎಂ ಚರ್ಚೆ ಇಲ್ಲ ಎಂದು ತಿಳಿಸಿದರು.
ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ವಿಚಾರದ ಕುರಿತು ಮಾತನಾಡಿ, ಒಂದು ಮಳೆ ಬಂದರೆ ಕಾವೇರಿ ವಿಚಾರ ತಣ್ಣಗಾಗುತ್ತೆ. ಈಗ ನಮ್ಮ ಸರ್ಕಾರ ಇರುವಾಗ ವಿರೋಧ ಮಾಡಲು ಆಗಲ್ಲ. ನಮ್ಮ ಸರ್ಕಾರ ಕೋರ್ಟ್ ಮೂಲಕ ಸಮಸ್ಯೆ ಸರಿ ಮಾಡಲು ಯತ್ನಿಸ್ತಿದೆ. ಬಿಜೆಪಿಯವರು ಈಗ ವಿರೋಧ ಪಕ್ಷದಲ್ಲಿ ಇದ್ದು ವಿರೋಧಿಸ್ತಾ ಇದ್ದಾರೆ. ನಮ್ಮ ಸರ್ಕಾರ ಈ ರಾಜ್ಯದ ಜನರ ಪರವಾಗಿಯೇ ಕೆಲಸ ಮಾಡಲಿದೆ. ಕರ್ನಾಟಕ ಕಾವೇರಿ ವಿಚಾರದಲ್ಲಿ ಸೋಲಲು ಅನೇಕ ಕಾರಣಗಳಿವೆ ಎಂದರು.
ನಾವು ಕಾವೇರಿ ನೀರನ್ನು ಗರಿಷ್ಠವಾಗಿ ಉಪಯೋಗ ಮಾಡಿಲ್ಲ. ಆ ಕಾಲದ ಆಡಳಿತಗಾರರು ಮಾಡಿದ ತಪ್ಪಿನಿಂದ ಹೀಗಾಗುತ್ತಿದೆ. ಯಗಚಿ ಅಣೆಕಟ್ಟು ಮಾಡೋದನ್ನೂ ಅನೇಕರು ತಡೆದಿದ್ದರು. ಇದರಿಂದ ನಮಗೆ ಸಿಗಬೇಕಾದ ನೀರಿನ ಪಾಲು ಸಿಗಲಿಲ್ಲ ಎಂದು ಹೇಳಿದರು.
ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಒಳಗೊಂಡ…
ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…