BREAKING NEWS

ಸುದೀಪ್ ಸಿನಿಮಾ, ಜಾಹೀರಾತುಗಳಿಗೆ ತಡೆ ನೀಡಲು ಚುನಾವಣಾ ಆಯೋಗಕ್ಕೆ ಜೆಡಿಎಸ್ ಮನವಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಚಿತ್ರನಟ ಕಿಚ್ಚ ಸುದೀಪ್ ಅವರು ಕಾಣಿಸಿಕೊಂಡಿರುವ ಕಾರ್ಯಕ್ರಮಗಳು ಮತ್ತು ಜಾಹೀರಾತುಗಳ ಪ್ರಸಾರಕ್ಕೆ ತಡೆ ವಿಧಿಸುವಂತೆ ಜಾತ್ಯತೀತ ಜನತಾದಳವು(ಜೆಡಿಎಸ್) ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಅವರ ಸಿನಿಮಾಗಳು, ಪೋಸ್ಟರ್‌ಗಳು, ಕಾರ್ಯಕ್ರಮಗಳು ಮತ್ತು ಜಾಹೀರಾತು. ಮುಂತಾದವುಗಳಿಗೆ ತಡೆ ಹಾಕುವಂತೆ ಮನವಿ ಮಾಡಲಾಗಿದೆ.

ಸುದೀಪ್ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದು, ಅವರು ಕಾಣಿಸಿಕೊಂಡಿರುವ ಕಾರ್ಯಕ್ರಮಗಳು ಮತ್ತು ಜಾಹೀರಾತುಗಳು ಮತದಾರರ ಮೇಲೆ ಪರಿಣಾಮ ಬೀರಬಹುದು ಎಂದು ಜೆಡಿಎಸ್ ಮನವಿ ಪತ್ರದಲ್ಲಿ ತಿಳಿಸಿದೆ.

‘ಸುದೀಪ್ ಅವರು ಕರ್ನಾಟಕ ಸಿಎಂ ಜೊತೆಗೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಬಿಜೆಪಿಯ ಲೆಟರ್ ಹೆಡ್‌ನಲ್ಲಿ ಎಲ್ಲಾ ಮಾಧ್ಯಮಗಳಿಗೆ ಆಹ್ವಾನ ಕಳುಹಿಸಿದ್ದಾರೆ. ಸಿಎಂ ಏನು ಹೇಳುತ್ತಾರೋ ಅದನ್ನು ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಕ್ಕೆ ಬದ್ಧರಾಗಿದ್ದಾರೆ, ಆದ್ದರಿಂದ ಅವರು ರಾಜಕಾರಣಿ. ಅದಕ್ಕಾಗಿಯೇ ನಾವು ಸುದೀಪ್ ಅವರ ಚಲನಚಿತ್ರಗಳು, ಒಟಿಟಿ ವೇದಿಕೆಗಳು, ಜಾಹೀರಾತುಗಳ ವಿಷಯವನ್ನು ಪರಿಶೀಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ’ಎಂದು ಜೆಡಿಎಸ್ ಮುಖಂಡ ತನ್ವೀರ್ ಅಹಮದ್ ಹೇಳಿದ್ದಾರೆ.

ಇತ್ತೀಚೆಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಸುದೀಪ್, ಯಾವುದೇ ಪಕ್ಷದ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೇಳಿಲ್ಲ. ಆದರೆ, ಬೊಮ್ಮಾಯಿ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಹೇಳಿದ್ದರು.

‘ಬಸವರಾಜ ಬೊಮ್ಮಾಯಿ ಅವರು ನನಗೆ ಚಿಕ್ಕಂದಿನಿಂದಲೂ ಪರಿಚಿತರು. ನಾನು ಚಿಕ್ಕವನಿದ್ದಾಗಿಂದಲೂ ಅವರನ್ನು ಮಾಮ ಎಂದೇ ಕರೆಯುತ್ತಿದ್ದೆ. ಚಿತ್ರರಂಗದಲ್ಲಿ ನಾನು ಕಡು ಕಷ್ಟದಲ್ಲಿ ಇದ್ದ ಸಂದರ್ಭದಲ್ಲಿ ನನ್ನ ಕೈ ಹಿಡಿದ ಬೆರಳೆಣಿಕೆಯ ಜನರಲ್ಲಿ ಬೊಮ್ಮಾಯಿ ಒಬ್ಬರು. ಈಗ ಅವರು ನನ್ನ ಬೆಂಬಲ ಕೇಳಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ನೆರವಾಗುವ ಮೂಲಕ ಕೃತಜ್ಞತೆ ಸಲ್ಲಿಸುವುದು ನನ್ನ ಕರ್ತವ್ಯ. ಆದ್ದರಿಂದ ಅವರು ಎಲ್ಲಿ ಹೇಳುತ್ತಾರೆಯೋ ಅಲ್ಲಿ ಪ್ರಚಾರ ನಡೆಸುತ್ತೇನೆ. ಹಾಗೆಂದು ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವಷ್ಟು ಸಮಯವೂ ಇಲ್ಲ, ಮಾಡುವುದೂ ಇಲ್ಲ. ಕೆಲವು ಕಡೆಗಳಲ್ಲಿ ಮಾತ್ರ ಪ್ರಚಾರ ಮಾಡುತ್ತೇನೆ’ಎಂದಿದ್ದರು.

‘ಪಕ್ಷ ಎನ್ನುವುದಕ್ಕಿಂತ ವೈಯಕ್ತಿಕ ನೆಲೆಯಲ್ಲಿ ಮುಖ್ಯಮಂತ್ರಿಯವರು ಕರೆದಿದ್ದಾರೆ. ಅವರ ಬೆಂಬಲಕ್ಕೆ ನಿಂತಿದ್ದೇನೆ. ಬೊಮ್ಮಾಯಿ ಅವರು ರಾಜಕೀಯ ಪ್ರವೇಶ ಮಾಡುವುದಕ್ಕೂ ಮೊದಲಿಂದಲೂ ಪರಿಚಿತರು. ಹೀಗಾಗಿ ಇಲ್ಲಿ ಪಕ್ಷಗಳ ವಿಚಾರ ಬರುವುದಿಲ್ಲ. ವ್ಯಕ್ತಿಗಾಗಿ ನಾನು ಬಂದಿದ್ದೇನೆ. ಕಳೆದ 27 ವರ್ಷಗಳಿಂದ ಚಿತ್ರರಂಗದಲ್ಲಿ ಕಠಿಣವಾಗಿ ಪರಿಶ್ರಮವನ್ನು ಹಾಕಿ ದೊಡ್ಡ ಅಭಿಮಾನಿ ಬಳಗವನ್ನು ಪಡೆದಿದ್ದೇನೆ. ಅವರಲ್ಲಿ ಎಲ್ಲ ಪಕ್ಷವನ್ನು ಬೆಂಬಲಿಸುವವರೂ ಇದ್ದಾರೆ. ಹೀಗಾಗಿ ರಾಜಕೀಯ ಪ್ರವೇಶ ಮಾಡುವುದಿಲ್ಲ. ಒಂದು ವೇಳೆ ರಾಜಕೀಯ ಸೇರುವುದೇ ಆದಲ್ಲಿ ಮುಂಚಿತವಾಗಿಯೇ ಹೇಳಿಯೇ ಸೇರುತ್ತೇನೆ’ ಎಂದೂ ಸುದೀಪ್‌ ಸ್ಪಷ್ಟಪಡಿಸಿದ್ದರು.

ನನ್ನ ಕಷ್ಟದಲ್ಲಿ ಯಾರು ನನ್ನ ಜತೆ ಇದ್ದರೋ ಅಂತಹವರು ಯಾವುದೇ ಪಕ್ಷದಲ್ಲಿದ್ದರೂ ಅವರ ನೆರವಿಗೆ ಹೋಗುತ್ತೇನೆ. ಮುನಿರತ್ನ ಅವರಿಗೂ ಪ್ರಚಾರ ಮಾಡಿದ್ದೆ. ಆಗ ಅವರು ಬೇರೆ ಪಕ್ಷದಲ್ಲಿದ್ದರು ಎಂದಿದ್ದರು.

andolanait

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

45 mins ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

54 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

1 hour ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

2 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

2 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

2 hours ago