ಬೆಂಗಳೂರು : ಜೆಡಿಎಸ್-ಬಿಜೆಪಿಯ ಮೈತ್ರಿ ಹೊಸದೇನಲ್ಲ. ಆದರೆ ಜಾತ್ಯತೀತ ಜನತಾದಳದ ಸಿದ್ದಾಂತ ಬಿಜೆಪಿಯೊಂದಿಗೆ ಸಖ್ಯವಾದಾಗ ಊರ್ಜಿತವಾಗಲಿದೆಯೇ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂಗಳಾದ ಕುಮಾರಣ್ಣ, ಅಶೋಕಣ್ಣ ಅವರು ಒಟ್ಟಾಗಿ ರಾಜಕೀಯ ಮಾಡಿದ್ದು ಗೊತ್ತಿದೆ. ಈಗ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಯ ಸಿ.ಪಿ.ಯೋಗೇಶ್ವರ್, ಜೆಡಿಎಸ್ ಜೊತೆಗಿನ ಮೈತ್ರಿಯ ಮಾತುಗಳನ್ನಾಡಿದ್ದಾರೆ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಅವರುಗಳ ಉಳಿವಿಗೆ ಏನು ಬೇಕಾದರೂ ಮಾಡಿಕೊಳ್ಳಲಿ ಎಂದರು.
ಆದರೆ ಇಲ್ಲಿ ಪ್ರಶ್ನೆ ಇರುವುದು ಜಾತ್ಯತೀತ ಸಿದ್ದಾಂತ ಆಧಾರಿತವಾಗಿ ಸ್ಥಾಪನೆಯಾದ ಜನತಾದಳಕ್ಕೆ ಬಿಜೆಪಿಯ ಜೊತೆ ಸಖ್ಯ ಮಾಡಿದಾಗ ಅದನ್ನು ಕಾರ್ಯಕರ್ತರು ಜೀರ್ಣಿಸಿಕೊಳ್ಳುವುದು ಹೇಗೆ ಎಂಬುದು. ಉಳಿದಂತೆ ಅವರ ಪಕ್ಷದ ವಿಚಾರವಾಗಿ ತಾವು ಏನನ್ನೂ ಹೇಳಲು ಬಯಸುವುದಿಲ್ಲ ಎಂದು ಹೇಳಿದರು.
ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಮಂಡಿಸಿದ ಬಜೆಟ್‍ನಲ್ಲೆ ಘೋಷಿಸಲಾಗಿತ್ತು. ಟೆಂಡರ್ ಕೂಡ ಕರೆಯಲಾಗಿತ್ತು. ಅದು ಇನ್ನು ರದ್ದುಗೊಂಡಿಲ್ಲ. ಭೂಮಿ ಪೂಜೆ ಹಂತದಲ್ಲಿ ಕಾಲೇಜು ಮಂಜೂರಾತಿಯನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಲಾಗಿತ್ತು.
ಈಗ ನಮ್ಮ ಸರ್ಕಾರ ಕನಕಪುರ ಹಾಗೂ ರಾಮನಗರ ಎರಡೂ ಕಡೆ ಜನರಿಗೆ ಅನುಕೂಲ ಮಾಡಿಕೊಡಲಿದೆ. ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾದರೆ, ರಾಮನಗರದಲ್ಲಿ ಆರೋಗ್ಯ ವಿಶ್ವವಿದ್ಯಾಲಯದ ಬೃಹತ್ ಆಸ್ಪತ್ರೆ ಇರಲಿದೆ ಎಂದರು.
ಬಿಜೆಪಿಯವರು ಪ್ರತಿಭಟನೆ ಮಾಡುತ್ತಿರುವುದು ಯಾವ ಉದ್ದೇಶಕ್ಕೆ ಎಂಬುದೇ ಅವರಿಗೆ ಸ್ಪಷ್ಟತೆ ಇಲ್ಲ. ಕಾಂಗ್ರೆಸ್ ಸರ್ಕಾರ ಜನ ವಿರೋ ಎಂದು ಹೇಳುತ್ತಿದ್ದಾರೆ. ಅವರು ಜನ ವಿರೋಗಳಾಗಿದ್ದಕ್ಕಾಗಿಯೇ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗದ ಸ್ಥಿತಿಗೆ ಜನ ಕಳುಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಪಂಚಖಾತ್ರಿಗಳನ್ನು ಸಹಿಸಿಕೊಳ್ಳಲು ಬಿಜೆಪಿಯವರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಟೀಕಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಬೈಂದೂರಿನ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಕಾಂಗ್ರೆಸ್ ಸೇರುವುದಾಗಿ ನೀಡಿರುವ ಹೇಳಿಕೆಯನ್ನು ತಾವು ಅಲ್ಲಗೆಳೆಯುವುದಿಲ್ಲ. ಅವರ ಭವಿಷ್ಯಕ್ಕಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ನಾನು ಆಪರೇಷನ್ ಹಸ್ತ ಮಾಡುವುದಿಲ್ಲ. ಅದಕ್ಕೆ ನಾನು ವಿರುದ್ಧ. ಆಪರೇಷನ್ ಕಮಲಕ್ಕೂ ವಿರುದ್ಧವಿದ್ದೇನೆ. ನನ್ನದೂ ಸಹಕಾರದ ಸ್ನೇಹದ ಹಸ್ತ. ಕಾಂಗ್ರೆಸ್ ಪಕ್ಷದ ನಾಯಕತ್ವ, ಸಿದ್ಧಾಂತ ನೋಡಿ ಸೇರ್ಪಡೆಗೊಳ್ಳುವವರನ್ನು ತಬ್ಬಿಕೊಳ್ಳುತ್ತೇನೆ. ಎಷ್ಟು ಜನ ಬರುತ್ತಾರೆ ಎಂದು ಅವರವರ್ಯಾಗಿಯೇ ಹೇಳುತ್ತಿದ್ದಾರಲ್ಲ. ಎಲ್ಲರಿಗೂ ಒಳ್ಳೆಯದಾಗಬೇಕು. ರಾಜ್ಯದಲ್ಲಿ ಯಾರು ಶತ್ರುಗಳಿಲ್ಲ. ಅದಕ್ಕೆ ನಮ್ಮ ಜಿಲ್ಲೆಯೇ ಸಾಕ್ಷಿಯಾಗಿದೆ. ನಾನು ಯಾರನ್ನು ಕರೆಯುವುದಿಲ್ಲ. ಅವರ ಭವಿಷ್ಯಕ್ಕಾಗಿ ಬರುತ್ತಾರೆ. ಯಾರು ದಡ್ಡರಿಲ್ಲ. ನಾನು ಏನೋ ತಡೆದುಕೊಂಡಿದ್ದೆ ಎಂದರೆ ಎಲ್ಲರೂ ತಡೆದುಕೊಳ್ಳುತ್ತಾರಾ. ಮಹಾರಾಷ್ಟ್ರದಲ್ಲಿ ಏನಾಯಿತು. ಎಲ್ಲವೂ ವಾಷಿಂಗ್ ಮಿಷನ್ ಆಗಿ ಹೋಯಿತು ಎಂದ ಅವರು, ಪಕ್ಷ ಸೇರ್ಪಡೆಯಾಗುವವರಿಗೆ ಒಳ್ಳೆಯ ಶುಭ ಗಳಿಗೆ ಬೇಕಲ್ಲ ಎಂದರು.
ಬಿಜೆಪಿಯವರು ಇಲ್ಲಿ ಪ್ರತಿಭಟನೆ, ಟೀಕೆ ಮಾಡುವ ಬದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಮೇಕೆದಾಟು ಮತ್ತು ಮಹದಾಯಿ ಯೋಜನೆಗೆ ಅಗತ್ಯ ಅನುಮತಿಗಳನ್ನು ಕೊಡಿಸಲಿ. ಅವರ ಕಾಲಾವಯಲ್ಲಿ ಜಾರಿಗೆ ತಂದ ಚುನಾವಣಾ ಪ್ರಣಾಳಿಕೆಗಳ ಮಾಹಿತಿ ನೀಡಲಿ. ಎಲ್ಲರ ಖಾತೆಗೂ 15 ಲಕ್ಷ ಹಾಕುವುದು ಎಲ್ಲಿಯವರೆಗೂ ಬಂದಿದೆ ಎಂದು ಹೇಳಲಿ ಎಂದು ಪ್ರಶ್ನಿಸಿದರು.
ವಿಪ್ರೊ ಅಧ್ಯಕ್ಷ ಅಜೀಂ ಪ್ರೇಮ್‍ಜೀ ಅವರು ದೇಶದ ದೊಡ್ಡ ಆಸ್ತಿ. 50 ಸಾವಿರ ಜನರಿಗೆ ನೇರ ಉದ್ಯೋಗ ಕಲ್ಪಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊರೆಯನ್ನು ತಗ್ಗಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸಿಎಸ್‍ಆರ್ ನಿಯಡಿ ನೆರವು ನೀಡುವ , ಸರ್ಕಾರಿ ಶಾಲಾ ಶಿಕ್ಷಕರಿಗೆ ತರಬೇತಿ ಕೊಡಿಸುವ ಮತ್ತು ತಂತ್ರಜ್ಞರನ್ನು ನೇಮಿಸುವ ಕುರಿತಂತೆ ಅವರೊಂದಿಗೆ ಚರ್ಚೆಗಳನ್ನು ನಡೆಸಲಾಗಿದೆ ಎಂದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…