BREAKING NEWS

ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿದೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎಲ್ಲಾ ವಿಚಾರಗಳು ಆರಂಭಿಕ ಹಂತದಲ್ಲಿದೆ. ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ. ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೈತ್ರಿಗೆ ಮಾಜಿ ಪ್ರಧಾನಿ ದೇವೇಗೌಡರು ಒಪ್ಪಿಗೆ ಸೂಚಿದ್ದಾರಾ ಎನ್ನುವ ಪ್ರಶ್ನೆಗೂ, ಕಾದು ನೋಡಿ ಎಂದಷ್ಟೇ ಉತ್ತರಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ನಾನು ಅಭಾರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿಕೂಟದ ಬಗ್ಗೆ ಅವರು ಹೇಳಿದ್ದಾರೆ. ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕಿದೆ. 2006 ರಲ್ಲಿಯೂ ನಾನು ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದೆ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ. ಯಾವುದೇ ಸರ್ಕಾರಕ್ಕೆ ನಾಲ್ಕು ವರ್ಷ ಕಳೆದ ಮೇಲೆ ಆಡಳಿತ ವಿರೋಧಿ ಅಲೆ ಎದುರಾಗುತ್ತದೆ. ಆದರೆ ಈ ಸರ್ಕಾರ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇಂಥ ಸರ್ಕಾರದ ವಿರುದ್ಧ ಸಂಘಟಿತವಾಗಿ ಹೋರಾಟ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

8 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

9 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

10 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

15 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

15 hours ago