ಬೆಂಗಳೂರು: ಜೆಡಿಎಸ್‌ಗೆ ಸಿದ್ಧಾಂತವೇ ಇಲ್ಲ, ಬಿಜೆಪಿ ಜೊತೆಗೆ ಹೋದರೆ ಜಾತ್ಯಾತೀತವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ವಿಧಾನಸೌಧದಲ್ಲಿ ಸೋಮವಾರ ಮಾತನಾಡಿ, ಮಹಾಘಟಬಂಧನ್ ಅಂತ ಬಂದು ನಂತರ ಏನಾಯ್ತು ನೋಡಿದ್ರಲ್ಲಾ ಅಂತ ಎಚ್.ಡಿ.ಕೆ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಜೆಡಿಎಸ್‌ಗೆ ಸಿದ್ಧಾಂತವೇ ಇಲ್ಲ, ಬಿಜೆಪಿ ಜೊತೆಗೆ ಹೋದರೆ ಜಾತ್ಯಾತೀತವೇ? ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ವಿಪಕ್ಷ ನಾಯಕರ ಎರಡನೇ ಸಭೆ ನಡೆಯುತ್ತಿದೆ. ಸುಮಾರು 24 ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾಗ್ತಿದ್ದಾರೆ. ಎಲ್ಲಾ ವಿಪಕ್ಷಗಳ ನಾಯಕರು ಕೂಡ ಭಾಗಿಯಾಗ್ತಿದ್ದಾರೆ. ಇಂದು ಮತ್ತು ನಾಳೆ ಎರಡು ದಿನ ಚರ್ಚೆ ನಡೆಯಲಿದೆ. ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟುಗೂಡಿ ಚುನಾವಣೆ ನಡೆಸಬೇಕು ಅನ್ನೋದು ಅಜೆಂಡಾ. ಹಾಗಾಗಿ ಚರ್ಚೆ ನಡೆಯುತ್ತಿದೆ ಎಂದರು.
ಕಾಂಗ್ರೆಸ್ ದೇಶದ ಆರ್ಥಿಕತೆ ಹಾಳು ಮಾಡಿದ್ರು ಅನ್ನೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದೆ ಬಿಜೆಪಿಯವರು. ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ, ಆರ್ಥಿಕತೆ ಹಾಳಾಗಿದೆ. ಜನರು ಬದುಕಲು ಸಾಧ್ಯವಾಗದ ರೀತಿಯಾಗಿದೆ. ಕೋಮುವಾದ ಘಟನೆಗಳು ಹೆಚ್ಚಾಗಿದೆ ಎಂದರು.
ಬಿಜೆಪಿ ಮುಗಿಸಲು ಒಟ್ಟಾಗಿದ್ದಾರೆ ಅನ್ನೋ ಆರೋಪ ವಿಚಾರಕ್ಕೆ, ಕರ್ನಾಟಕದಲ್ಲಿ ಸಮರ್ಥವಾಗಿ ಎದುರಿಸಲಿಲ್ವಾ.? ಮೋದಿಯವರು ಎಲ್ಲೆಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ನಡೆಸಿದ್ರು. 28 ಕಡೆ ಮೋದಿ ಹೋಗಿದ್ರು. ಹೋದ ಕಡೆಯಲ್ಲೆಲ್ಲಾ ನಾವು ಗೆದ್ದಿದ್ದೇವೆ. ಈ ಬಾರಿ ಬಿಜೆಪಿ ಮತ್ತು ಮಿತ್ರಪಕ್ಷಗಳು ಸೋಲಲಿವೆ ಎಂದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…