ಸಂಸದೆ ಸುಮಲತಾರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ: ಶಾಸಕ ರವೀಂದ್ರ ಶ್ರೀಕಂಠಯ್ಯ ಒತ್ತಾಯ

ಮಂಡ್ಯ: ಸಂಸದೆ ಸುಮಲತಾ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಜೆಡಿಎಸ್‌ ಶಾಸಕ ರವೀಂದ್ರ ಶ್ರೀಕಂಠಯ್ಯ ಆಗ್ರಹಿಸಿದ್ದಾರೆ.

ಸುಮಲತಾ ಅವರ ಸುತ್ತ ಗೂಂಡಾಗಳು, ವಂಚಕರಿದ್ದಾರೆ. ಅವರ ಅಟೆಂಡರ್‌ ಒಬ್ಬ ವಂಚಕ. ವೈದ್ಯಕೀಯ ಸೀಟು ಕೊಡಿಸುವುದಾಗಿ ಹಣ ಪಡೆದು ಹಲವರಿಗೆ ಮೋಸ ಮಾಡಿದ್ದಾನೆ. ಸುಮಲತಾ ಸುತ್ತ ಇರುವವರು ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಿದ್ದಾರೆ. ಇದರಿಂದ ಅಧಿಕಾರಿಗಳು ಮಾನಸಿಕವಾಗಿ ಜರ್ಜರಿತರಾಗಿದ್ದಾರೆ. ಹೀಗಾಗಿ, ಸುಮಲತಾರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

× Chat with us