BREAKING NEWS

ದೇವೇಗೌಡ್ರು ಅಡುಗೆ ಮನೆಯಲ್ಲಿ ಕುಂತ್ರೆ ಅರ್ಧ ಗಂಟೆಯಲ್ಲಿ ಜೆಡಿಎಸ್‌ ಟಿಕೆಟ್ ಹಂಚಿಕೆ ಮುಗಿಯುತ್ತೆ : ತೇಜಸ್ವಿ ಸೂರ್ಯ

ಬೀದರ್ : ಜೆಡಿಎಸ್‌ನಲ್ಲಿ ಟಿಕೆಟ್ ಕೊಡಬೇಕು ಅಂದ್ರೆ ಬಹಳ ಸುಲಭ. ದೇವೇಗೌಡ್ರು ಅಡುಗೆ ಮನೆಯಲ್ಲಿ ಕುಳಿತುಕೊಂಡ್ರೆ ಅರ್ಧ ಗಂಟೆಯಲ್ಲಿ ಎಲ್ಲಾ ಮುಗಿಯುತ್ತೆ ಎಂದು ಸಂಸದ ತೇಜಸ್ವಿ ಸೂರ್ಯ ಲೇವಡಿ ಮಾಡಿದ್ದಾರೆ.
ಬೀದರ್‌ನ ದಕ್ಷಿಣ ಕ್ಷೇತ್ರದ ಸಿಂಧೋಲ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು‌, ಜೆಡಿಎಸ್‌ನಲ್ಲಿ ಸೊಸೆಗೆ ಟಿಕೆಟ್ ಕೊಡಬೇಕಾ, ಮಗನಿಗೆ ಕೊಡಬೇಕಾ, ಮಗಳಿಗೆ ಕೊಡಬೇಕಾ ಇಲ್ಲಾ ಅಳಿಯನಿಗೆ ಕೊಡಬೇಕಾ ಎಂದು ಅಡುಗೆ ಮಾಡುತ್ತಾ ಟಿಕೆಟ್‌ ಹಂಚಿಕೆ ಮುಗಿದು ಹೋಗಿ ಬಿಡುತ್ತೆ. ಆದರೆ, ಹಾಸನ ಟಿಕೆಟ್ ಹಂಚಿಕೆ ಇನ್ನೂ ಮುಗಿಯುತ್ತಿಲ್ಲಾ ಯಾಕೆಂದರೆ ಹಾಸನದಲ್ಲಿ ಸೊಸೆಗೆ ಕೋಡಬೇಕೋ ಇಲ್ಲಾ ಮಗನಿಗೆ ಕೋಡಬೇಕಾ ಎಂಬ ಗಲಾಟೆ ಇನ್ನೂ ಭರಪೂರವಾಗಿ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ನಮ್ಮಲ್ಲಿ ಅಡುಗೆ ಮನೆ ಟಿಕೆಟ್‌ ಸಂಪ್ರದಾಯ ಇಲ್ಲ : ಕಾಂಗ್ರೆಸ್‌ನಲ್ಲಿ ಎರಡು – ಮೂರು ಬಣಗಳು ಕುಳಿತ್ರೆ ಟಿಕೆಟ್ ಫೈನಲ್‌ ಆಗತ್ತವೆ‌. ಆದರೆ, ಈ ರೀತಿ ಬೇಕಾದವರಿಗೆ ಟಿಕೆಟ್ ಕೊಟ್ಟ ಆರಣ ಸದ್ಯ ರಸ್ತೆ ರಸ್ತೆಯಲ್ಲಿ ಬಂಡಾಯ ಅಭ್ಯರ್ಥಿಗಳು ಹೊಡೆದಾಡುತ್ತಿದ್ದಾರೆ‌. ಆದರೆ, ಬಿಜೆಪಿಯಲ್ಲಿ ಮನೆಯಲ್ಲಿ ಕುಳಿತು, ಇಬ್ಬರು ಮೂವರೂ ಕುಳಿತುಕೊಂಡು ಟಿಕೆಟ್ ಫೈನಲ್ ಮಾಡುವ ಸಂಪ್ರದಾಯ ನಮ್ಮಲ್ಲಿ ಇಲ್ಲ. ರಾಜ್ಯ, ಕೇಂದ್ರದ ನಾಯಕರು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಿ ಟಿಕೆಟ್ ಕೊಡತ್ತಾರೆ ಎಂದು ಟಾಂಗ್ ಕೊಟ್ಟರು.

ಕಾಂಗ್ರೆಸ್‌ನಲ್ಲಿ ಪ್ರಚಾರ ಮಾಡಿದ್ದಾಗ ಸುದೀಪ್‌ ಒಳ್ಳೆಯವರು : ಕಾಂಗ್ರೆಸ್‌ನಲ್ಲಿ ಪ್ರಚಾರ ಮಾಡಿದ್ದಾಗ ಸುದೀಪ್‌ ಒಳ್ಳೆಯವರು ಸುದೀಪ್ ಅವರು ಬಿಜೆಪಿಗೆ ಬೆಂಬಲ ಸೂಚಿಸಿದರು. ಹೀಗಾಗಿ, ತಕ್ಷಣವೇ ಜೆಡಿಎಸ್ ಹಾಗೂ ಕಾಂಗ್ರೆಸ್‌ನವರು ಸುದೀಪ್ ಅವರನ್ನು ವಿಲನ್ ಮಾಡಿದರು. ಇದೇ ಸುದೀಪ್ ಕಳೆದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಆಗ ಸುದೀಪ್ ಬಹಳ‌ ಸಜ್ಜನ ಹಾಗೂ ಒಳ್ಳೆಯ ವ್ಯಕ್ತಿ‌ಯಾಗಿದ್ದರು ಅಲ್ವಾ ಎಂದು ಕಾಂಗ್ರೆಸ್‌ಗೆ ಪ್ರಶ್ನಿಸಿರು.

ಮೋದಿ ಮತ್ತು ಬೊಮ್ಮಾಯಿ ಸಂಬಂಧದಿಂದ ಸುದೀಪ್‌ ಬೆಂಬಲ : ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಜತೆಗಿನ ಸಂಬಂಧದಿಂದ ಸುದೀಪ್‌ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ನರಿಗೆ ಸುದೀಪ್‌ ಒಳ್ಳೆಯ ವ್ಯಕ್ತಿ ಅಲ್ಲ. ಅವರ ಸಿನಿಮಾ ಬ್ಯಾನ್ ಮಾಡಬೇಕು ಎಂದರು. ಜತೆ ಇಡಿ, ಸಿಬಿಐನ ಭಯದಲ್ಲಿ ಬಿಜೆಪಿಗೆ ಸುದೀಪ್‌ ಬೆಂಬಲ ನೀಡುತ್ತಿದ್ದಾರೆ ಎಂದು ಈ ರೀತಿ ಸುಳ್ಳಿನ ರಾಜಕಾರಣ ಕಾಂಗ್ರೆಸ್‌ನವರು ಮಾಡಿದರು ಎಂದು ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಕೆಎಸ್ ಐಐಡಿಸಿ ನಿಗಮ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಮತ್ತಿತರರು ಇದ್ದರು.

ಏ.10ಕ್ಕೆ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ ಸಾಧ್ಯತೆ : ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆಗೆ ಜೆಡಿಎಸ್‌, ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡಿದೆ. ಆದರೆ, ಬಿಜೆಪಿ ಇಂದಿಗೂ ಅಭ್ಯರ್ಥಿ ಪಟ್ಟಿ ಕಾಯ್ದಿರಿಸಿದ್ದು, ಏ.10 ಬಿಡುಗಡೆ ಮಾಡುವ ಸಾಧ್ಯತೆ ಇದೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

8 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

9 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

10 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

15 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

15 hours ago