BREAKING NEWS

ಜೋಡೆತ್ತುಗಳ ಪ್ರಮಾಣ ವಚನ : ಕಂಠೀರವದಲ್ಲಿ ಸ್ಟೇಡಿಯಮ್‌ ನಲ್ಲಿ ಯಾರಿಗೆಲ್ಲಿ ಪ್ರವೇಶ?

ಬೆಂಗಳೂರು : ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಕಾರ್ಯಕ್ರಮ ಜರುಗುವ ಹಿನ್ನೆಲೆಯಲ್ಲಿ ಅತಿಗಣ್ಯರು, ಗಣ್ಯರು ಹಾಗೂ ಸಾರ್ವಜನಿಕರು ಕ್ರೀಡಾಂಗಣ ಪ್ರವೇಶಿಸುವ ಕುರಿತು ನಗರ ಪೊಲೀಸರು ಸೂಚನೆಗಳನ್ನು ನೀಡಿದ್ದಾರೆ.

ಕೆಂಪು ಪಾಸ್‌ ಇದ್ದವರು ಕಸ್ತೂರಾಬಾ ರಸ್ತೆ ಮೂಲಕ ಕ್ರೀಡಾಂಗಣದ ಗೇಟ್‌ ಸಂಖ್ಯೆ 1 ಮತ್ತು ರಾಜಾರಾಮ ಮೋಹನರಾಯ್‌ ರಸ್ತೆಯ ಗೇಟ್‌ ಸಂಖ್ಯೆ 5ರ ಮುಖಾಂತರ ವಾಹನಗಳ ಅಧಿಕೃತ ಪಾಸ್‌ನೊಂದಿಗೆ ವಾಹನ ಸಮೇತ ಪ್ರವೇಶ ಪಡೆಯಬಹುದು

ಹಸಿರು ಪಾಸ್‌ ಇದ್ದವರು ರಾಜಾರಾಮ ಮೋಹನರಾಯ್‌ ರಸ್ತೆಯ ಗೇಟ್‌ ಸಂಖ್ಯೆ 5ರ ಮೂಲಕ ಕಾಲ್ನಡಿಗೆಯಲ್ಲಿ ಮಾತ್ರ ಕ್ರೀಡಾಂಗಣ ಪ್ರವೇಶಿಸಬೇಕು. ವಾಹನಗಳಿಗೆ ಪ್ರವೇಶವಿಲ್ಲ

ಹಳದಿ ಪಾಸ್‌ ಇದ್ದವರು ಸಿದ್ದಲಿಂಗಯ್ಯ ವೃತ್ತದ ಗೇಟ್‌ ಸಂಖ್ಯೆ 2ರ ಮೂಲಕ ಕಾಲ್ನಡಿಗೆಯಲ್ಲಿ ಮಾತ್ರ ಪ್ರವೇಶಿಸಬೇಕು. ವಾಹನಗಳಿಗೆ ಪ್ರವೇಶವಿಲ್ಲ

ಯಾವುದೇ ಪಾಸ್‌ ಇಲ್ಲದವರು ವಿಠಲ್‌ ಮಲ್ಯ ರಸ್ತೆಯ ಗೇಟ್‌ ಸಂಖ್ಯೆ 3 ಮತ್ತು 4ರ ಮುಖಾಂತರ ಕಾಲ್ನಡಿಗೆಯಲ್ಲಿ ಕ್ರೀಡಾಂಗಣ ಪ್ರವೇಶಿಸಬೇಕು. ಸಾರ್ವಜನಿಕರು ಕಾರ್ಯಕ್ರಮದ ವೇಳೆ ಸಂಯಮದಿಂದ ಇರಬೇಕು. ಸ್ಥಳದಲ್ಲಿ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಬೇಕು.

1 ಲಕ್ಷಕ್ಕೂ ಹೆಚ್ಚು ಜನ ಭಾಗಿ : ಕ್ರೀಡಾಂಗಣದಲ್ಲಿ ಸುಮಾರು 35000 ಸೀಟುಗಳ ವ್ಯವಸ್ಥೆ ಇದೆ. ಇದರಲ್ಲಿ ಗಣ್ಯರು, ಜನಪ್ರತಿನಿಧಿಗಳು ಹಾಗೂ ಆಹ್ವಾನಿತರಿಗೆ ಅವಕಾಶ ನೀಡಿ ಉಳಿದ ಜಾಗದಲ್ಲಿ ಸಾರ್ವಜನಿಕರು ಕೂರಲು ವ್ಯವಸ್ಥೆ ಮಾಡಲಾಗುತ್ತದೆ. ಉಳಿದಂತೆ ಮೈದಾನಕ್ಕೆ ಮ್ಯಾಟ್‌ ಹಾಕಲಾಗುತ್ತಿದ್ದು, ಅಲ್ಲೂ ಕುರ್ಚಿ ವ್ಯವಸ್ಥೆ ಮಾಡುವ ಮೂಲಕ ಸುಮಾರು 1 ಲಕ್ಷ ಮಂದಿಗೆ ವ್ಯವಸ್ಥೆ ಕಲ್ಪಿಸುವ ನಿರೀಕ್ಷೆಯಲ್ಲಿ ಅಧಿಕಾರಿಗಳು ಇದ್ದಾರೆ.

3,000ಕ್ಕೂ ಅಧಿಕ ಪೊಲೀಸರ ನಿಯೋಜನೆ : ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಅಂದಾಜಿಗಿಂತ ಹೆಚ್ಚು ಮಂದಿ ಆಗಮಿಸಿದರೆ ಎಂಬ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಕ್ರೀಡಾಂಗಣದ ಹೊರ ಭಾಗದಲ್ಲಿ ಟಿವಿ ಪರದೆಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಜತೆಗೆ ಭದ್ರತೆಗಾಗಿ 3 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಕೆಎಸ್‌ಆರ್‌ಪಿ, ಗೃಹರಕ್ಷಕ ದಳ, ಸಂಚಾರಿ ಪೋಲಿಸ್ ಸಿಬ್ಬಂದಿ ಸೇರಿ 3 ಸಾವಿರಕ್ಕೂ ಹೆಚ್ಚು ಮಂದಿಯನ್ನು ಈಗಾಗಲೇ ಭದ್ರತೆಗೆ ನಿಯೋಜಿಸಲಾಗಿದೆ. ವಿಶೇಷ ಪೋಲಿಸ್ ಆಯುಕ್ತ ಸಲೀಂ, ಕೇಂದ್ರ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಪ್ರತಿಯೊಬ್ಬರನ್ನೂ ಮೆಟಲ್‌ ಡಿಟೆಕ್ಟರ್‌ನಲ್ಲಿ ಪರಿಶೀಲನೆ ನಡೆಸಿದ ಬಳಿಕವೇ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ಮಂಡ್ಯದಲ್ಲಿ ಬರ್ಬರ ಕೊಲೆ ಪ್ರಕರಣ: ಸಾಲ ತೀರಿಸಲು ದರೋಡೆಗೆ ಇಳಿದಿದ್ದ ಪಾತಕಿ

ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್‌ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್‌ ವಿಚಾರ ಬಾಯ್ಬಿಟ್ಟಿದ್ದಾನೆ.…

24 mins ago

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

1 hour ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

1 hour ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

2 hours ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

2 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿದ ರಾಯ್‌ ಬರೇಲಿ ನ್ಯಾಯಾಲಯ

ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…

2 hours ago