ಬೆಂಗಳೂರು : ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಕೋರಿ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ವಿಧಾನಸಭೆಯ ಕಾರ್ಯದರ್ಶಿಗೆ ನೋಟಿಸ್ ನೀಡಿ ಮನವಿ ಮಾಡಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನೋಟಿಸ್‌ಗೆ ಸಹಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
“ಕರ್ನಾಟಕ ವಿಧಾನಸಭೆಯ ಎಲ್ಲಾ ಸದಸ್ಯರಿಂದ ಚುನಾಯಿತರಾಗಿರುವ ಸ್ಪೀಕರ್ ಅವರು ಸದನದ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಅವರನ್ನು ಸ್ಥಾನದಿಂದ ತೆಗೆದುಹಾಕಲು, ನಾವು ಕಾರ್ಯವಿಧಾನದ ನಿಯಮಗಳು ಮತ್ತು ನಿಯಮ 169 ರ ಪ್ರಕಾರ ಕರ್ನಾಟಕ ವಿಧಾನಸಭೆಯಲ್ಲಿ ವ್ಯವಹಾರ ನಡೆಸುವುದರ ವಿರುದ್ಧ ಪ್ರಸ್ತಾವನೆಯನ್ನು ಮಂಡಿಸಲು ಅವಕಾಶವನ್ನು ಕೋರುತ್ತೇವೆ” ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.