BREAKING NEWS

ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಬಿಜೆಪಿ-ಜೆಡಿಎಸ್ ನಿಂದ ಜಂಟಿ ಅವಿಶ್ವಾಸ ನೋಟಿಸ್

ಬೆಂಗಳೂರು : ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಕೋರಿ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ವಿಧಾನಸಭೆಯ ಕಾರ್ಯದರ್ಶಿಗೆ ನೋಟಿಸ್ ನೀಡಿ ಮನವಿ ಮಾಡಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಎಚ್​.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ನೋಟಿಸ್‌ಗೆ ಸಹಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

“ಕರ್ನಾಟಕ ವಿಧಾನಸಭೆಯ ಎಲ್ಲಾ ಸದಸ್ಯರಿಂದ ಚುನಾಯಿತರಾಗಿರುವ ಸ್ಪೀಕರ್ ಅವರು ಸದನದ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಅವರನ್ನು ಸ್ಥಾನದಿಂದ ತೆಗೆದುಹಾಕಲು, ನಾವು ಕಾರ್ಯವಿಧಾನದ ನಿಯಮಗಳು ಮತ್ತು ನಿಯಮ 169 ರ ಪ್ರಕಾರ ಕರ್ನಾಟಕ ವಿಧಾನಸಭೆಯಲ್ಲಿ ವ್ಯವಹಾರ ನಡೆಸುವುದರ ವಿರುದ್ಧ ಪ್ರಸ್ತಾವನೆಯನ್ನು ಮಂಡಿಸಲು ಅವಕಾಶವನ್ನು ಕೋರುತ್ತೇವೆ” ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

45 seconds ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago