BREAKING NEWS

ಡಿ.1ರವರೆಗೆ ನ್ಯೂಸ್‌ಕ್ಲಿಕ್ ಸಂಸ್ಥಾಪಕ, ಎಚ್.ಆರ್ ಮುಖ್ಯಸ್ಥರಿಗೆ ನ್ಯಾಯಾಂಗ ಬಂಧನ

ನವದೆಹಲಿ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಹಾಗೂ  ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಡಿಸೆಂಬರ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಚೀನಾ ಪರ ಪ್ರಚಾರ ಮಾಡಲು ಹಣ ಪಡೆದ ಆರೋಪದ ಮೇರೆಗೆ ಉಗ್ರ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾದ ಪ್ರಕರಣದ ತನಿಖೆಯ ಸಮಯದಲ್ಲಿ ತನ್ನ  ಎಲೆಕ್ಟ್ರಾನಿಕ್ ಸಾಧನಗಳನ್ನು ಬಿಡುಗಡೆ ಮಾಡುವಂತೆ ಪ್ರಬೀರ್ ಪುರ್ಕಾಯಸ್ಥ ಸಲ್ಲಿಸಿದ ಅರ್ಜಿಗೆ ಉತ್ತರ ನೀಡಲು ಮುಂಬೈನ ನ್ಯಾಯಾಲಯ ದೆಹಲಿ ಪೊಲೀಸರಿಗೆ 10 ದಿನಗಳ ಕಾಲಾವಕಾಶ ನೀಡಿದೆ.

ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರನ್ನು ನವೆಂಬರ್ 2, 2023 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಈ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಮತ್ತೆ ಒಂದು ತಿಂಗಳ ಕಾಲ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ವಿಸ್ತರಿಸಿದೆ.

ಚೀನಾ ಪರ ಪ್ರಚಾರಕ್ಕಾಗಿ ಪೋರ್ಟಲ್‌ಗೆ ಹಣ ಬಂದಿದೆ ಎಂಬ ಆರೋಪದ ಮೇಲೆ ಅಕ್ಟೋಬರ್ 3 ರಂದು ದೆಹಲಿ ಪೊಲೀಸ್ ವಿಶೇಷ ಘಟಕವನ್ನು ಇಬ್ಬರನ್ನು ಬಂಧಿಸಿತ್ತು.

andolanait

Recent Posts

10ನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು: ಗೊ.ರು.ಚ ಹಕ್ಕೊತ್ತಾಯ

ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…

12 mins ago

ಕಾರು ಪಲ್ಟಿ; ಇಬ್ಬರಿಗೆ ಗಾಯ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…

25 mins ago

ಸಂವಿಧಾನ ವಿಧಿ 371(ಜೆ) ಅಡಿಯಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ…

1 hour ago

ಕಾಂಗ್ರೆಸ್ ಸರ್ಕಾರದಲ್ಲಿ ಅಕ್ಷರಶಃ ಕರ್ನಾಟಕ ರೌಡಿಗಳ ರಾಜ್ಯವಾಗಿದೆ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು…

2 hours ago

ಸಿ.ಟಿ.ರವಿ ಬಂಧನ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…

3 hours ago

87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಜಗದ ಮೂಲೆ ಮೂಲೆಗೂ ಕನ್ನಡ ವಾಣಿ ಹರಡಲಿ: ಚಲುವರಾಯಸ್ವಾಮಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…

3 hours ago