Mysore
17
clear sky

Social Media

ಗುರುವಾರ, 29 ಜನವರಿ 2026
Light
Dark

ಶಕ್ತಿ ಯೋಜನೆ ವಿರೋಧಿಸಿ ಜುಲೈ 27 ಬಂದ್‌: ಖಾಸಗಿ ಸಾರಿಗೆ ಮಾಲೀಕರ ಸಂಘ

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯನ್ನು ವಿರೋಧಿಸಿ ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಜುಲೈ 27 ರಂದು ಬಂದ್ ಆಚರಿಸಲಿದೆ.

ಇದರಿಂದಾಗಿ ಜು.26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿಯ ವರೆಗೂ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‍ಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ.

ರಾಜ್ಯ ಸರ್ಕಾರದ ಕೆಲವು ನೀತಿಗಳಿಂದ ಖಾಸಗಿ ಸಾರಿಗೆಗೆ ನಷ್ಟವಾಗುತ್ತಿದೆ. ಈ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ಖಾಸಗಿ ಸಾರಿಗೆ ವಾಹನಗಳ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಶಕ್ತಿ ಯೋಜನೆ , ವೈಟ್ ಬೋರ್ಡ್ ವಾಹನವನ್ನ ವಾಣಿಜ್ಯ ವಾಹನವಾಗಿ ಉಪಯೋಗಿಸುತ್ತಿರುವುದು, ದ್ವಿಚಕ್ರ ವಾಹನಗಳಿಗೆ ಮುಕ್ತ ಪರವಾನಿಗೆ ನೀಡುತ್ತಿರುವುದು ಸೇರಿದಂತೆ ಹಲವು ಯೋಜನೆಗಳಿಂದ ಖಾಸಗಿ ಸಾರಿಗೆ ನೆಲ ಕಚ್ಚಿ ಹೋಗಿದೆ ಎಂದು ಖಾಸಗಿ ಸಾರಿಗೆ ಮಾಲೀಕರು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಸೂಕ್ತ ಕ್ರಮ ಕೈಗೊಳ್ಳದೆ ಇರುವುದರಿಂದ ಖಾಸಗಿ ಬಸ್ ಮಾಲೀಕರು ಮತ್ತು ಸಿಬ್ಬಂದಿ ಕಂಗಾಲಾಗಿದ್ದಾರೆ. ಜೊತೆಗೆ ಆಟೋರಿಕ್ಷಾಗಳಿಗೂ ಬಾಡಿಗೆ ಸಿಗುತ್ತಿಲ್ಲ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್ ಗೆ ಮುಂದಾಗಿವೆ.

ಹೀಗಾಗಿ ಜುಲೈ 26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿ 12 ರ ವರೆಗೆ ಓಲಾ, ಉಬರ್, ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್ ಸಂಚಾರ ಇರಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಖಾಸಗಿ ಬಸ್ ಮಾಲೀಕರ ಸಂಘದ ಎಸ್. ನಟರಾಜ್ ಶರ್ಮಾ ತಿಳಿಸಿದ್ದಾರೆ.

ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ರ್ಯಾಲಿ ನಡೆಸುವ ಮೂಲಕ ಸರ್ಕಾರ ಗಮನ ಸೆಳೆಯಲುಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.

ವೈಟ್‍ಬೋರ್ಡ್ ವಾಹನಗಳು ನಿಯಮ ಉಲ್ಲಂಘಿಸಿ ಬಾಡಿಗೆಗೆ ಓಡಿಸುವುದನ್ನು ತಡೆಯಬೇಕು ಮತ್ತು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಚಾಲಕರ ಶಾಲಾ-ಕಾಲೇಜು ಮಕ್ಕಳಿಗೆ ಧನ ಸಹಾಯ ನೀಡಬೇಕು. ಸರ್ಕಾರಿ ವಾಹನದಲ್ಲಿ ನಿರ್ದಿಷ್ಟ ಪ್ರಯಾಣಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಬೇಕು. ಶಕ್ತಿ ಯೋಜನೆಗೆ ಹೊಸ ಮಾರ್ಗಸೂಚಿ ರೂಪಿಸಬೇಕು. ಪ್ರವಾಸಿ ಹಾಗೂ ಕಾಂಟ್ರಾಕ್ಟ್ ಕ್ಯಾರೇಜ್ ಬಸ್‍ಗಳಿಗೆ ತೆರಿಗೆ ಕಡಿತಗೊಳಿಸಬೇಕು. ಐದು ಪರ್ಸೆಂಟ್‍ಗಳಿಗಿಂತ ಹೆಚ್ಚು ಕಮಿಷನ್ ಪಡೆಯುತ್ತಿರುವ ಓಲಾ ಮತ್ತು ಊಬರ್ ಮತ್ತು ರೆಡ್ ಬಸ್‍ಗಳಂತಹ ಆನ್‍ಲೈನ್ ಕಂಪೆನಿಗಳಿಗೆ ನಿರ್ಬಂಧ ಹೇರಬೇಕು. ಚಾಲಕರಿಗೆ ವಸತಿ ಯೋಜನೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಡಲಾಗಿದೆ.

ಸುದ್ದಿಗೋಷ್ಟಿಯಲ್ಲಿ ಆಟೋ,ಕ್ಯಾಬ್, ಟ್ಯಾಕ್ಸಿ, ಓಲಾ,ಉಬರ್ ಹಾಗೂ ಖಾಸಗಿ ಬಸ್ ಸೇರಿದಂತೆ 23 ಸಂಘಟನೆಗಳ ಮುಖಂಡರಾದ ರಾಧಾಕೃಷ್ಣ ಹೊಳ್ಳ, ಜಿ. ನಾರಾಯಣ ಸ್ವಾಮಿ, ರಘು ನಾರಾಯಣಗೌಡ, ಎಂ. ಮಂಜುನಾಥ್, ಗಂಡಸಿ ಸದಾನಂದ ಸ್ವಾಮಿ ಸೇರಿಂದಂತೆ ಹಲವರು ಭಾಗಿಯಾಗಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!