ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಸುಪ್ರೀಂ ಕೋರ್ಟ್ ಮುಂದೆ ವಾಸ್ತವಾಂಶ ಇಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಅಕ್ಟೋಬರ್ 15ರ ವರೆಗೆ ನಿತ್ಯ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ನಾವು ನಮ್ಮ ಎಲ್ಲ ವಾಸ್ತವ ಅಂಶಗಳನ್ನ ಸಿಡಬ್ಲ್ಯೂಆರ್‌ಸಿ, ಸಿಡಬ್ಲ್ಯೂಎಂಎ ಹಾಗೂ ಸುಪ್ರೀಂ ಕೋರ್ಟ್ ಮುಂದಿಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಗುತ್ತಿಲ್ಲ. ಇಂದಿನ ಸಭೆಯ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ. ಆದೇಶದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡುತ್ತೇವೆ. ಈ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಬಹುದಾ? ಅಂತ ಕಾನೂನು ತಜ್ಞರ ಜೊತೆ ಮಾತನಾಡಿದ್ದೇನೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಸಭೆಯನ್ನೂ ಕರೆದಿದ್ದೇನೆ. ಅವರೊಂದಿಗೂ ಮಾತನಾಡಿ ಮುಂದೇನು ಮಾಡಬೇಕು ಅನ್ನೋ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಇದೇ ವೇಳೆ ಸಿಂಗಾಪುರಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಕೊಡಲಿಲ್ಲ. ನಾವು ದುಡ್ಡು ಕೊಡ್ತೀವಿ, ಅಕ್ಕಿ ಕೊಡಿ ಅಂದರೂ ಕೇಂದ್ರ ಸರ್ಕಾರ ಕೊಡಲಿಲ್ಲ. ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡ್ತಿದೆ. ಬಡವರ ಕಾರ್ಯಕ್ರಮಕ್ಕೆ ಅಕ್ಕಿ ಕೊಡಲು ಬಿಜೆಪಿಗೆ ಆಸಕ್ತಿ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…