BREAKING NEWS

ಸುಪ್ರೀಂ ಕೋರ್ಟ್‌ ಮುಂದೆ ವಾಸ್ತವಾಂಶ ಇಟ್ಟರೂ ನ್ಯಾಯ ಸಿಗುತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಸುಪ್ರೀಂ ಕೋರ್ಟ್ ಮುಂದೆ ವಾಸ್ತವಾಂಶ ಇಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಅಕ್ಟೋಬರ್ 15ರ ವರೆಗೆ ನಿತ್ಯ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ನಾವು ನಮ್ಮ ಎಲ್ಲ ವಾಸ್ತವ ಅಂಶಗಳನ್ನ ಸಿಡಬ್ಲ್ಯೂಆರ್‌ಸಿ, ಸಿಡಬ್ಲ್ಯೂಎಂಎ ಹಾಗೂ ಸುಪ್ರೀಂ ಕೋರ್ಟ್ ಮುಂದಿಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಗುತ್ತಿಲ್ಲ. ಇಂದಿನ ಸಭೆಯ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ. ಆದೇಶದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡುತ್ತೇವೆ. ಈ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಬಹುದಾ? ಅಂತ ಕಾನೂನು ತಜ್ಞರ ಜೊತೆ ಮಾತನಾಡಿದ್ದೇನೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಸಭೆಯನ್ನೂ ಕರೆದಿದ್ದೇನೆ. ಅವರೊಂದಿಗೂ ಮಾತನಾಡಿ ಮುಂದೇನು ಮಾಡಬೇಕು ಅನ್ನೋ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಇದೇ ವೇಳೆ ಸಿಂಗಾಪುರಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಕೊಡಲಿಲ್ಲ. ನಾವು ದುಡ್ಡು ಕೊಡ್ತೀವಿ, ಅಕ್ಕಿ ಕೊಡಿ ಅಂದರೂ ಕೇಂದ್ರ ಸರ್ಕಾರ ಕೊಡಲಿಲ್ಲ. ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡ್ತಿದೆ. ಬಡವರ ಕಾರ್ಯಕ್ರಮಕ್ಕೆ ಅಕ್ಕಿ ಕೊಡಲು ಬಿಜೆಪಿಗೆ ಆಸಕ್ತಿ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.

 

lokesh

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

2 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

8 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

8 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

9 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

10 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

16 hours ago