BREAKING NEWS

ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಪೋಟ ಪ್ರಕರಣ : ಮಾಸ್ಟರ್​ಮೈಂಡ್​ನನ್ನು ಹತ್ಯೆಗೈದ ತಾಲಿಬಾನ್

ನವದೆಹಲಿ : 2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹಿಂದಿರುವ ವ್ಯಕ್ತಿಯನ್ನು ತಾಲಿಬಾನ್ ಹತ್ಯೆಗೈದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ, ಈ ಕೃತ್ಯಕ್ಕೆ ಕಾರಣಕರ್ತರಾಗಿದ್ದ ಐಸಿಸ್ ಉಗ್ರನನ್ನು ತಾಲಿಬಾನ್ ಹತ್ಯೆ ಮಾಡಿದೆ ಎನ್ನುವ ಮಾಹಿತಿ ಸಿಕ್ಕಿದೆ. ಅಮೆರಿಕ ಮತ್ತು ಇತರೆ ದೇಶಗಳು ಸಾವಿರಾರು ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಗಳಲ್ಲಿ ತೊಡಗಿಕೊಮಡಿರುವ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಹಮೀದ್ ಕರ್ಝಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋಟ ಸಂಭವಿಸಿತ್ತು, ಅಮೆರಿಕ ಸೇನೆಯು ಇದನ್ನು ದೃಢಪಡಿಸಿತ್ತು. 13ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ದೇಶವನ್ನು ತೊರೆಯಲು ಸಾವಿರಾರು ಜನರು ಕಳೆದ 12 ದಿನಗಳಿಂದಲೂ ಠಿಕಾಣಿ ಹೂಡಿರುವ ವಿಮಾನ ನಿಲ್ದಾಣದ ಮುಖ್ಯ ಅಬ್ಬೆ ಗೇಟ್​ನಲ್ಲಿ ಸ್ಫೋಟ ಸಂಭವಿಸಿತ್ತು.

ಕಾಬೂಲ್ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು, ಉಗ್ರ ದಾಳಿ ಬೆದರಿಕೆ ಇರುವುದರಿಂದ ಭದ್ರತಾ ದೃಷ್ಟಿಯಿಂದ ಅಫ್ಗಾನಿಸ್ತಾದ ಕಾಬೂಲ್ನಲ್ಲಿರುವ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಾರದು ಎಂದು ಬ್ರಿಟನ್ ಸರ್ಕಾರ ತನ್ನ ನಾಗರಿಕರಿಗೆ ಸೂಚನೆ ನೀಡಿತ್ತು.

ವಿದೇಶಿ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್ಸಿಡಿಒ) ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಅತಂತ್ರವಾಗಿದೆ ಎಂದು ಹೇಳಿದ್ದು, ಬ್ರಿಟಿಷ್ ನಾಗರಿಕರು ಮತ್ತು ಇತರ ಸ್ಥಳಾಂತರಗೊಂಡವರು ಸುರಕ್ಷಿತ ಸ್ಥಳಗಳಿಗೆ ತೆರಳಿ, ಮುಂದಿನ ಸೂಚನೆ ಬರುವವರೆಗೆ ಅಲ್ಲಿಯೇ ಇರಿ ಎಂದು ಸೂಚನೆ ನೀಡಿತ್ತು.

lokesh

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

2 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

2 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

2 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

2 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

3 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

3 hours ago