ನವದೆಹಲಿ : 2021ರಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹಿಂದಿರುವ ವ್ಯಕ್ತಿಯನ್ನು ತಾಲಿಬಾನ್ ಹತ್ಯೆಗೈದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ, ಈ ಕೃತ್ಯಕ್ಕೆ ಕಾರಣಕರ್ತರಾಗಿದ್ದ ಐಸಿಸ್ ಉಗ್ರನನ್ನು ತಾಲಿಬಾನ್ ಹತ್ಯೆ ಮಾಡಿದೆ ಎನ್ನುವ ಮಾಹಿತಿ ಸಿಕ್ಕಿದೆ. ಅಮೆರಿಕ ಮತ್ತು ಇತರೆ ದೇಶಗಳು ಸಾವಿರಾರು ಜನರನ್ನು ತೆರವುಗೊಳಿಸುವ ಕಾರ್ಯಾಚರಣೆಗಳಲ್ಲಿ ತೊಡಗಿಕೊಮಡಿರುವ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಹಮೀದ್ ಕರ್ಝಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋಟ ಸಂಭವಿಸಿತ್ತು, ಅಮೆರಿಕ ಸೇನೆಯು ಇದನ್ನು ದೃಢಪಡಿಸಿತ್ತು. 13ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.
ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ದೇಶವನ್ನು ತೊರೆಯಲು ಸಾವಿರಾರು ಜನರು ಕಳೆದ 12 ದಿನಗಳಿಂದಲೂ ಠಿಕಾಣಿ ಹೂಡಿರುವ ವಿಮಾನ ನಿಲ್ದಾಣದ ಮುಖ್ಯ ಅಬ್ಬೆ ಗೇಟ್ನಲ್ಲಿ ಸ್ಫೋಟ ಸಂಭವಿಸಿತ್ತು.
ಕಾಬೂಲ್ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು, ಉಗ್ರ ದಾಳಿ ಬೆದರಿಕೆ ಇರುವುದರಿಂದ ಭದ್ರತಾ ದೃಷ್ಟಿಯಿಂದ ಅಫ್ಗಾನಿಸ್ತಾದ ಕಾಬೂಲ್ನಲ್ಲಿರುವ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಾರದು ಎಂದು ಬ್ರಿಟನ್ ಸರ್ಕಾರ ತನ್ನ ನಾಗರಿಕರಿಗೆ ಸೂಚನೆ ನೀಡಿತ್ತು.
ವಿದೇಶಿ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್ಸಿಡಿಒ) ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಅತಂತ್ರವಾಗಿದೆ ಎಂದು ಹೇಳಿದ್ದು, ಬ್ರಿಟಿಷ್ ನಾಗರಿಕರು ಮತ್ತು ಇತರ ಸ್ಥಳಾಂತರಗೊಂಡವರು ಸುರಕ್ಷಿತ ಸ್ಥಳಗಳಿಗೆ ತೆರಳಿ, ಮುಂದಿನ ಸೂಚನೆ ಬರುವವರೆಗೆ ಅಲ್ಲಿಯೇ ಇರಿ ಎಂದು ಸೂಚನೆ ನೀಡಿತ್ತು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…