ಕಾಗವಾಡ (ಬೆಳಗಾವಿ ಜಿಲ್ಲೆ): ಕಾಗವಾಡ– ಮಿರಜ್ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಬುಧವಾರ, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹ 70 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ಮಿರಜ್‌ನಿಂದ ಕಾಗವಾಡ ತಾಲ್ಲೂಕಿನ ಉಗಾರ ಪಟ್ಟಣಕ್ಕೆ ಬರುತ್ತಿದ್ದ ಕಾರಿನಲ್ಲಿ ಈ ಹಣ ಸಿಕ್ಕಿದೆ. ಕಾರ್ ವಶಪಡಿಸಿಕೊಂಡ ಪೊಲೀಸರು ಚಾಲನಕನ್ನು ಬಂಧಿಸಿದ್ದಾರೆ. ಆದರೆ, ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ನೀಡಿಲ್ಲ.
ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ ಹಾರೂಗೇರಿ ಚೆಕ್‌ಪೋಸ್ಟ್‌ನಲ್ಲಿ ಕೂಡ ₹2.30 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ಯರಗಟ್ಟಿ ಗೋದಾಮಿನಲ್ಲಿ ಸಂಗ್ರಹಿಸಿ ಇಟ್ಟಿದ್ದ ₹ 3.5 ಲಕ್ಷ ಮೊತ್ತದ ಹೊಲಿಗೆ ಯಂತ್ರಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…