BREAKING NEWS

ವಿಶ್ವದ ಎರಡನೇ ಕಿರಿಯ ವ್ಯಕ್ತಿಯಾಗಿ ಮೌಂಟ್‌ ಎವರೆಸ್ಟ್‌ ಏರಿದ ಭಾರತದ ಬಾಲಕಿ ಕಾಮ್ಯ!

ನವದೆಹಲಿ: ಮುಂಬೈನ 16 ವರ್ಷದ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್‌ ಅವರು ವಿಶ್ವದ ಅತ್ಯಂತ ಎತ್ತರದ ಶಿಖರ ಮೌಂಟ್‌ ಎವರೆಸ್ಟ್‌ನ್ನು ಏರುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.

ಮುಂಬೈನ ನೇವಿ ಚಿಲ್ಡ್ರನ್‌ ಶಾಲೆಯಲ್ಲಿ 12ನೇ ತರಗತಿಯಲ್ಲಿ ಓದುತ್ತಿರುವ ಕಾಮ್ಯ ಸೋಮವಾರ ಮೌಂಟ್‌ ಎವರೆಸ್ಟ್‌ ಏರುವ ಮೂಲಕ ವಿನೂತನ ದಾಖಲೆ ಬರೆದಿದ್ದಾರೆ.

ಈ ಶಿಖರವನ್ನೇರಲು ಅವರು, ತಮ್ಮ ತಂದೆ ಕಮಾಂಡರ್‌ ಎಸ್‌. ಕಾರ್ತಿಕೇಯನ್‌ ಜತೆಗೂಡಿ ಈ ಕಾರ್ಯ ಸಾಧನೆ ಮಾಡಿದ್ದಾರೆ. ಇದೀಗ ಇವರ ಸಾಧನೆಯನ್ನು ಭಾರತೀಯ ನೌಕಾಪಡೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಕಾಮ್ಯ ಅವರು ಬಾಲ್ಯದಲ್ಲಿಯೇ ಟ್ರೆಕ್ಕಿಂಗ್‌ ಮೇಲೆ ಆಸಕ್ತಿ ಬೆಳೆಸಿಕೊಂಡಿದ್ದು, ತಂದೆಯೊಂದಿಗೆ ಕೂಡಿ ಟ್ರೆಕ್ಕಿಂಗ್‌ ಮಾಡಲು ತಾವು ಮೂರು ವರ್ಷದವಳಾಗಿದ್ದಾಗಲೇ ಆರಂಭಿಸಿದ್ದಾರೆ. ಬಳಿಕ ಇದು ಅಭ್ಯಾಸವಾಗಿ ಮೌಂಟ್‌ ಎವರೆಸ್ಟ್‌ ಏರುವ ವರೆಗೆ ಬೆಳೆದು ನಿಂತಿದೆ.

ಕಾಮ್ಯ ಅವರು ಈವರೆಗೆ ಹರ್‌-ಕಿ ಡನ್‌, ಕೇದಾರನಾಥ ಶಿಖರ್‌, ರೂಪ್‌ಕುಂಡ್‌ ಸರೋವರಗಳನ್ನು ಏರಿದ್ದರು. ಕಾಮ್ಯ ಅವರು ತಮ್ಮ 13ನೇ ವಯಸ್ಸಿನಲ್ಲಿಯೇ ಎವರೆಸ್ಟ್‌ ಬೇಸ್‌ ಕ್ಯಾಂಪ್‌ ಹತ್ತುವ ಮೂಲಕ ಇತಿಹಾಸ ನಿರ್ಮಿಸಿದ್ದರು.

ಈ ಸಾಧನೆ ಗುರುತಿಸಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಮನ್‌ಕಿ ಬಾತ್‌ನಲ್ಲಿ ಈಕೆಯ ಸಾಧನೆಯನ್ನು ಕೊಂಡಾಡಿದ್ದರು. 2021ರಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಕಾಮ್ಯ ಅವರು ಮುಡಿಗೇರಿಸಿಕೊಂಡಿದ್ದಾರೆ.

https://x.com/indiannavy/status/1793529331685396758

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕುವೈತ್‌ ಪ್ರವಾಸ: ಪ್ರಧಾನಿ ಮೋದಿಗೆ 20ನೇ ಅಂತರಾಷ್ಟ್ರೀಯ ಗೌರವ

ಕುವೈತ್‌/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್‌ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್‌ ಮಿಶಾಲ್‌ ಅಲ್‌…

2 mins ago

ಮೈಸೂರಿನಲ್ಲಿ ನಿಮ್ಹಾನ್ಸ್‌ ಘಟಕ ಸ್ಥಾಪನೆಗೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…

7 mins ago

ಫೇಕ್‌ ಎನ್‌ಕೌಂಟರ್‌ ಹೇಳಿಕೆ: ಪ್ರಹ್ಲಾದ್‌ ಜೋಶಿ ವಿರುದ್ಧ ಬಿ.ಕೆ.ಹರಿಪ್ರಸಾದ್‌ ಕಿಡಿ

ಬೆಂಗಳೂರು: ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನೀಡಿರುವ ಹೇಳಿಕೆ ಅಮಿತ್‌…

37 mins ago

ಹೆಣ್ಣು ಕಾನೂನನ್ನು ಅರಿತರೆ ಅಷ್ಟೇ, ದೌರ್ಜನ್ಯ ಎದುರಿಸಲು ಸಾಧ್ಯ: ನಾಗಲಕ್ಷ್ಮೀ ಚೌಧರಿ

ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…

1 hour ago

ಮೈಸೂರು:  ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…

2 hours ago

ಡಿ.ಕೆ.ಸಹೋದರರಿಗೆ ಮದುವೆ ಕರೆಯೋಲೆ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರಿಗೆ ನೀಡಿ…

2 hours ago