ಬೆಂಗಳೂರು : ಇಂಡಿಯಾ ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕನ್ನಡಪರ ಹೋರಾಟಗಾರರಿಗೆ ನೋಟಿಸ್ ನೀಡಿದ ಹಿನ್ನೆಲೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಪೊಲೀಸರ ಮೂಲಕ ನೋಟಿಸ್ ಕೊಡುವ ಕೆಲಸ ಮಾಡುತ್ತಿದೆ. ಕನ್ನಡ ಹೋರಾಟಗಾರು ಗೂಂಡಗಳಲ್ಲ, ಅವರು ಯಾವುದೇ ಬಸ್‍ಗಳಿಗೆ ಬೆಂಕಿ ಹಾಕಿಲ್ಲ. ಅಂಗಡಿಗಳ ಮೇಲೆ ದಾಳಿ ಮಾಡಿಲ್ಲ. ಆದರೂ ಸರ್ಕಾರ ನೋಟಿಸ್ ನೀಡಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.
ಕಾವೇರಿ ನಮ್ಮ ಮಹಾರಾಜರ ಶ್ರಮದಿಂದ ಕಟ್ಟಿದ್ದು, ಕಾವೇರಿ ಕೊಳ್ಳದಲ್ಲೇ ಅನೇಕ ತಾಲೂಕುಗಳು ಬರದಲ್ಲಿ ಬಳಲುತ್ತಿವೆ. ಆದರೆ ತಮಿಳುನಾಡಿಗೆ ಬೆಳೆ ಬೆಳೆಯಲು ನೀರು ಬಿಡಲಾಗುತ್ತಿದೆ. ನಮಗೆ ಕುಡಿಯಲು ನೀರಿಲ್ಲ. ತಮಿಳರು ಸಮುದ್ರಕ್ಕೆ ನೀರು ಹರಿಸುತ್ತಿದ್ದಾರೆ. ಈ ವೇಳೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿಗಳಿಗೆ ನಾನು ಮನವಿ ಮಾಡುತ್ತಿದ್ದೇನೆ. ಬಣ ರಾಜಕೀಯದಿಂದ ಈ ವಿಚಾರ ಮುನ್ನೆಲೆಗೆ ಬರುತ್ತಿಲ್ಲ. ಶೀಘ್ರ ಸುಗ್ರವಾಜ್ಞೆ ಜಾರಿಗೆ ತಂದು, ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಬೇಕು ಎಂದಿದ್ದಾರೆ.
ನಾವು ನಿಯಮ ಮೀರಿ ಬಂದ್ ಮಾಡುತ್ತಿಲ್ಲ. ಕೊವೀಡ್ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಈಗ ನಾವು ಪ್ರತಿಭಟನೆ ಮಾಡುವುದನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಮಾಡಿದ್ದು ಗೊತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಸಿಗಲಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಇದರ ಬೆಲೆ ತೆರಬೇಕಾಗುತ್ತದೆ. ಏನೇ ಆದರೂ ಹೋರಾಟವನ್ನು ಕೈಬಿಡುವುದಿಲ್ಲ ಹೋರಾಟವನ್ನು ಮುಂದುವರೆಸುತ್ತೇವೆ ಎಂದಿದ್ದಾರೆ.
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…