ಸಿಂಹಾದ್ರಿಯ ಸಿಂಹ ಸೇರಿ ಹಲವು ಚಿತ್ರಗಳಿಗೆ ನಿರ್ಮಾಪಕರಾಗಿದ್ದ ವಿಜಯ್‌ಕುಮಾರ್‌ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್(63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ.

ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು. ಸಿಂಹಾದ್ರಿಯ ಸಿಂಹ ಸೇರಿದಂತೆ ಹಲವು ಚಿತ್ರ ನಿರ್ಮಾಣ ಮಾಡಿದ್ದರು. ಅಲ್ಲದೇ, ಬಿ.ಎಸ್.ಯಡಿಯೂರಪ್ಪ ಅವರ ಅಧಿಕಾರವಧಿಯಲ್ಲಿ ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

× Chat with us