Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಕನ್ನಡ ಸೀರಿಯಲ್​ ನಟ ಸಂಪತ್​ ಜಯರಾಮ್​ ಆತ್ಮಹತ್ಯೆ

ಬೆಂಗಳೂರು : ಕಿರುತರೆ ನಟ ಸಂಪತ್ ಜಯರಾಮ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಟ ಸಂಪತ್ ಜಯರಾಮ್‌ ಅವರು ಕಿರುತೆರೆ ಮತ್ತು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ.ಕನ್ನಡದ ಕೆಲವು ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿದ್ದ ಸಂಪತ್​ ಜಯರಾಮ್​ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಂಪತ್​ ಜಯರಾಮ್​ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ. ಶನಿವಾರ ನೆಲಮಂಗಲದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಪತ್​ ಅವರಿಗೆ 35 ವರ್ಷ ವಯಸ್ಸಾಗಿತ್ತು. ಇತ್ತೀಚೆಗಷ್ಟೇ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಒಂದು ವರ್ಷದ ಹಿಂದೆ ಮದುವೆ ಆಗಿದ್ದ ಅವರು ಈಗ ಇಹಲೋಕ ತ್ಯಜಿಸಿರುವುದು ಅವರ ಆಪ್ತರಿಗೆ ತೀವ್ರ ನೋವು ಉಂಟುಮಾಡಿದೆ. ನೆಲಮಂಗಲದ ಆಸ್ಪತ್ರೆಯಿಂದ ಎನ್​ಆರ್​ ಪುರಕ್ಕೆ ಅವರ ಮೃತದೇಹ ರವಾನೆ ಆಗಲಿದೆ.
ಸಂಪತ್​ ಜಯರಾಮ್​ ನಿಧನಕ್ಕೆ ನಟ ರಾಜೇಶ್​ ಧ್ರುವ ಅವರು ಸಂತಾಪ ಸೂಚಿಸಿದ್ದಾರೆ. ಅಗಲಿದ ಗೆಳೆಯನನ್ನು ನೆನದು ಅವರು ಕಂಬನಿ ಮಿಡಿದಿದ್ದಾರೆ. ‘ನಿನ್ನ ಅಗಲಿಕೆ ತಡ್ಕೊಳೋ ಶಕ್ತಿ ನಮಗಿಲ್ಲ ಮಗ. ಅದೆಷ್ಟೋ ಸಿನಿಮಾ ಮಾಡೋದಿದೆ. ಅದೆಷ್ಟೋ ಜಗಳ ಬಾಕಿ ಇದೆ. ಕಂಡ ಕನಸು ನನಸು ಮಾಡ್ಕೋಳೋಕೆ ಇನ್ನೂ ಸಾಕಷ್ಟು ಸಮಯ ಇದೆ. ಇನ್ನೂ ನಿನ್ನ ದೊಡ್ಡ ದೊಡ್ಡ ಸ್ಟೇಜ್​ನಲ್ಲಿ ನೋಡೋದು ಇದೆ ಕಣೋ. ವಾಪಾಸ್ ಬಾರೋ ಪ್ಲೀಸ್’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ