ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿದ್ದ ಲೀಲಾವತಿ ಇಂದು ( ಡಿಸೆಂಬರ್ 8 ) ಅಸುನೀಗಿದ್ದಾರೆ. ಕನ್ನಡದಲ್ಲಿ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಲೀಲಾವತಿ ಇತರೆ ಭಾಷೆಗಳೂ ಸೇರಿದಂತೆ ಒಟ್ಟು 600ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ.
ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ 1938ರಲ್ಲಿ ಜನಿಸಿದ್ದ ನಟಿ ಲೀಲಾವತಿ ಆರನೇ ವರ್ಷಕ್ಕೆ ತನ್ನ ಪೋಷಕರನ್ನು ಕಳೆದುಕೊಂಡಿದ್ದರು. ಇದೀಗ ಬಾರದ ಲೋಕಕ್ಕೆ ಪಯಣ ಬೆಳೆಸಿರುವ ಲೀಲಾವತಿ ತಮ್ಮ ಒಬ್ಬನೇ ಮಗ ವಿನೋದ್‌ರಾಜ್‌ಅವರನ್ನು ಅಗಲಿದ್ದಾರೆ.
ಚಂಚಲ ಕುಮಾರಿ ಎಂಬ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಅವಕಾಶ ಪಡೆದ ಲೀಲಾವತಿ ನಾಗ ಕನ್ನಿಕಾ, 1958ರ ಭಕ್ತ ಪ್ರಹ್ಲಾದ, ಮಾಂಗಲ್ಯ ಯೋಗ, ಧರ್ಮ ವಿಜಯ ಹಾಗೂ ರಣಧೀರ ಕಂಠೀರವ ಚಿತ್ರಗಳಲ್ಲಿ ಸಣ್ಣ ಪಾತ್ರಗಳನ್ನು ನಿರ್ವಹಿಸಿದ್ದರು. ಮಹಾಲಿಂಗ ಭಾಗವತರ ಶ್ರೀ ಸಾಹಿತ್ಯ ಸಾಮ್ರಾಜ್ಯ ಡ್ರಾಮಾ ಕಂಪನಿಯಲ್ಲಿಯೂ ಕೆಲಸ ಮಾಡಿದ್ದ ಲೀಲಾವತಿ 1960ರಲ್ಲಿ ತೆರೆಗೆ ಬಂದಿದ್ದ ರಾಣಿ ಹೊನ್ನಮ್ಮ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕಿಯಾದರು.
ಕನ್ನಡದ ಪ್ರಮುಖ ನಾಯಕ ನಟರ ಜತೆ ನಾಯಕಿಯಾಗಿ ನಟಿಸಿರುವ ಲೀಲಾವತಿ ನಂತರದ ದಿನಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಲು ಆರಂಭಿಸಿದ್ದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…