ನಿನ್ನೆ (ನವೆಂಬರ್ 27) ಕಾಂತಾರ ಚಾಪ್ಟರ್ 1ರ ಫಸ್ಟ್‌ಲುಕ್ ಟೀಸರ್ ಬಿಡುಗಡೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡ ಇಂದು ( ನವೆಂಬರ್ 28 ) ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ ಸಿಲ್ವರ್ ಪೀಕಾಕ್ ಅವಾರ್ಡ್ ಅನ್ನು ಬಾಚಿಕೊಂಡಿದೆ.
54ನೇ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ ಪ್ರಶಸ್ತಿ ಪ್ರದಾನ ಇಂದು ನಡೆದಿದ್ದು ʼಸ್ಪೆಷಲ್ ಜ್ಯೂರಿʼ ಕೆಟಗರಿ ಅಡಿಯಲ್ಲಿ ರಿಷಬ್ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಕುರಿತು ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಐಎಫ್‌ಎಫ್‌ಐ “ಸ್ಪೆಷಲ್ ಜ್ಯೂರಿಯಿಂದ ಗುರುತಿಸಿಕೊಳ್ಳುವುದು ಯಾವಾಗಲೂ ಮಹತ್ವದ್ದಾಗಿದ್ದು ಈ ವರ್ಷ ರಿಷಬ್ ಶೆಟ್ಟಿ ತಮ್ಮ ಕಾಂತಾರ ಚಿತ್ರಕ್ಕಾಗಿ ಈ ಸ್ಪೆಷಲ್ ಜ್ಯೂರಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಎಂಥಹ ಘಳಿಗೆ ಇದು” ಎಂದು ಬರೆದುಕೊಂಡಿದೆ.
ಇನ್ನು ಈ ಕುರಿತು ಕಾಂತಾರ ಚಿತ್ರದ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಸಹ ಬರೆದುಕೊಂಡಿದ್ದು “ಕಾಂತಾರ ಚಿತ್ರ ಸಿಲ್ವರ್ ಪೀಕಾಕ್ ಅವಾರ್ಡ್ ಗೆದ್ದ ಕನ್ನಡದ ಮೊದಲ ಚಿತ್ರ ಎಂಬ ಹೊಸ ಅಧ್ಯಾಯವನ್ನು ಬರೆದಿದೆ ಎಂಬುದನ್ನು ಹೇಳಿಕೊಳ್ಳಲು ಹೆಮ್ಮೆಪಡುತ್ತೇವೆ” ಎಂದು ಉಲ್ಲೇಖಿಸಿದೆ. ಈ ಮೂಲಕ ಕಾಂತಾರ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ.
ಇನ್ನು ಕಾಂತಾರ ಚಿತ್ರ ಮೊದಲು ಸಿಲ್ವರ್ ಪೀಕಾಕ್ ಪ್ರಶಸ್ತಿ ಗೆದ್ದ ದಾಖಲೆ ಬರೆದಿದ್ದರೆ, 1978ರಲ್ಲಿ ಶಂಕರ್ ನಾಗ್ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕಾಗಿ ʼಸಿಲ್ವರ್ ಪೀಕಾಕ್ ಅತ್ಯುತ್ತಮ ನಟ ಪ್ರಶಸ್ತಿʼ ಗೆದ್ದಿದ್ದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…