BREAKING NEWS

ಕಾಂತರಾಜ್‌ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು: ಕೆ.ಎಸ್ ಈಶ್ವರಪ್ಪ

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಏಕೆ ಅಧಿಕಾರಕ್ಕೆ ತಂದೆವೋ ಎಂದು ಜನ ನೊಂದುಕೊಳ್ಳುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಈ ಸರ್ಕಾರ ಇರಬಾರದು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ ಸಮ್ಮಿಶ್ರ ಸರಕಾರ. ಕಾಂತರಾಜ್‌ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು. ಕಾಂತರಾಜ್‌ ವರದಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದರೆ, ಡಿ.ಕೆ.ಶಿವಕುಮಾರ್ ವರದಿ ಬಿಡುಗಡೆ ಮಾಡಲು ಬಿಡಲ್ಲ ಎಂದು ಹೇಳುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼʼರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ಲೆಕ್ಕವೇ ಸಿಗುತ್ತಿಲ್ಲ.‌ ಜಿಲ್ಲಾ ಮಂತ್ರಿಗಳು ರೈತರ ಕಷ್ಟವನ್ನು ಆಲಿಸುತ್ತಿಲ್ಲ. ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಕುರ್ಚಿಗಾಗಿ ಕಚ್ಚಾಡುತ್ತಿದ್ದಾರೆʼʼ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕನಿಲ್ಲದ ಹಾಗೂ ಜೆಡಿಎಸ್ ಜನರಿಲ್ಲದ ಪಕ್ಷಗಳು ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪ, ʼʼದೇಶದಲ್ಲಿ ಯಾವುದೇ ವ್ಯಕ್ತಿಯನ್ನು ಕೇಳಿದರೂ ಅವರಿಗೆ ನರೇಂದ್ರ ಮೋದಿ ಗೊತ್ತು, ನಿಮ್ಮ ನಾಯಕ ಯಾರು? ರಾಹುಲ್ ಗಾಂಧಿನಾʼʼ ಎಂದು ಪ್ರಶ್ನಿಸಿದರು.

ʼʼಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದಿದ್ದ ಪ್ರಿಯಾಂಕ ಖರ್ಗೆ ಈಗ ನಾನೆ ಸಿಎಂ ಆಗಬೇಕು ಎನ್ನುವ ಮಟ್ಟಕ್ಕೆ ಬೆಳೆದಿದ್ದಾರೆ. ಇದು ಯಾವ ನ್ಯಾಯ, ಅವರಿಗೆ ಮಾನ ಮರ್ಯಾದೆ ಇದಿಯಾʼ?ʼ ಎಂದು ಪ್ರಶ್ನಿಸಿದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago