ಬೆಂಗಳೂರು : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 2020 ಕ್ಷೇತ್ರಗಳಲ್ಲಿ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, 3.044 ಮಂದಿಯ ನಾಮಪತ್ರಗಳು ಸ್ವೀಕೃತವಾಗಿದ್ದು,406 ನಾಮಪತ್ರಗಳು ತಿರಸ್ಕೃತಗೊಂಡಿವೆ.
ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆಯದಿನವಾಗಿತ್ತು, 3.632 ಮಂದಿ 5.102 ನಾಮಪತ್ರಗಳನ್ನು ಸಲ್ಲಿಸಿದ್ದರು. 5.102 ನಾಮಪತ್ರಗಳನ್ನ ಶುಕ್ರವಾರ ಪರಿಶೀಲನೆ ನಡೆಸಲಾಯ್ತು.
ಕೆಲವು ಅಭ್ಯರ್ತಿಗಳ ನಾಮಪತ್ರಗಳಿಗೆ ಸಂಬಂಧಿಸಿ ತಕರಾರು ಸಲ್ಲಿಕೆಯಾಗಿರುವುದರಿಂದ ಸವದತ್ತಿ ಯಲ್ಲಮ್ಮ,ಔರಾದ್,ಹಾವೇರಿ ಮತ್ತು ಶಿವಾಜಿನಗರ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
220 ಕ್ಷೇತ್ರಗಳಲ್ಲಿ ಪುರುಷರಿಂದ 4.607 ಮಹಿಳೆಯರಿಂದ 381 ಮತ್ತು ಅಲ್ಪಸಂಖ್ಯಾತರಿಂದ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದವು.
ಬಿಜೆಪಿಯ 219 ಕಾಂಗ್ರೆಸ್ ನ 218 ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದ ತಲಾ 207 ಬಹುಜನ ಸಮಾಜ ಪಕ್ಷದಿಂದ 135,ಸಿಪಿಎಂನ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ಅಂಗಿಕಾರವಾಗಿವೆ.
ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥೀ ಬಿ.ಝಡ್.ಜಮೀರ್ ಅಹಮ್ಮದ್ ಖಾನ್,ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ಆರ್ ವಿಶ್ವನಾಥ್,ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್ ನ ಟಿ.ಎನ್ ಜವರಾಯಿ ಗೌಡ ಸೇರಿದಂತೆ ಹಲವು ಅಭ್ಯರ್ಥಿಗಳ ನಾಮಪತ್ರಗಳಿಗೆ ಪ್ರತಿಸ್ಪರ್ಧಿಗಳು ತಕರಾರು ಸಲ್ಲಿಸಿದ್ದರು.ಬಹುತೇಕ ಕಡೆ ವಿಚಾರಣೆ ನಡೆಸಿ,ತಕರಾರು ವಜಾಗೊಳಿಸಿದ ಬಳಿಕ ನಾಮಪತ್ರಗಳನ್ನು ಅಂಗೀಕರಿಸಲಾಯಿತು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…