BREAKING NEWS

ಕರ್ನಾಟಕ ವಿಧಾನಸಭಾ ಚುನಾವಣೆ : 406 ನಾಮಪತ್ರ ತಿರಸ್ಕೃತ

ಬೆಂಗಳೂರು : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 2020 ಕ್ಷೇತ್ರಗಳಲ್ಲಿ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, 3.044 ಮಂದಿಯ ನಾಮಪತ್ರಗಳು ಸ್ವೀಕೃತವಾಗಿದ್ದು,406 ನಾಮಪತ್ರಗಳು ತಿರಸ್ಕೃತಗೊಂಡಿವೆ.
ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆಯದಿನವಾಗಿತ್ತು, 3.632 ಮಂದಿ 5.102 ನಾಮಪತ್ರಗಳನ್ನು ಸಲ್ಲಿಸಿದ್ದರು. 5.102 ನಾಮಪತ್ರಗಳನ್ನ ಶುಕ್ರವಾರ ಪರಿಶೀಲನೆ ನಡೆಸಲಾಯ್ತು.
ಕೆಲವು ಅಭ್ಯರ್ತಿಗಳ ನಾಮಪತ್ರಗಳಿಗೆ ಸಂಬಂಧಿಸಿ ತಕರಾರು ಸಲ್ಲಿಕೆಯಾಗಿರುವುದರಿಂದ ಸವದತ್ತಿ ಯಲ್ಲಮ್ಮ,ಔರಾದ್‌,ಹಾವೇರಿ ಮತ್ತು ಶಿವಾಜಿನಗರ ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.
220 ಕ್ಷೇತ್ರಗಳಲ್ಲಿ ಪುರುಷರಿಂದ 4.607 ಮಹಿಳೆಯರಿಂದ 381 ಮತ್ತು ಅಲ್ಪಸಂಖ್ಯಾತರಿಂದ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದವು.
ಬಿಜೆಪಿಯ 219 ಕಾಂಗ್ರೆಸ್‌ ನ 218 ಜೆಡಿಎಸ್‌ ಮತ್ತು ಆಮ್‌ ಆದ್ಮಿ ಪಕ್ಷದ ತಲಾ 207 ಬಹುಜನ ಸಮಾಜ ಪಕ್ಷದಿಂದ 135,ಸಿಪಿಎಂನ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ಅಂಗಿಕಾರವಾಗಿವೆ.
ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥೀ ಬಿ.ಝಡ್.ಜಮೀರ್‌ ಅಹಮ್ಮದ್‌ ಖಾನ್‌,ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ಆರ್‌ ವಿಶ್ವನಾಥ್‌,ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್‌ ನ ಟಿ.ಎನ್‌ ಜವರಾಯಿ ಗೌಡ ಸೇರಿದಂತೆ ಹಲವು ಅಭ್ಯರ್ಥಿಗಳ ನಾಮಪತ್ರಗಳಿಗೆ ಪ್ರತಿಸ್ಪರ್ಧಿಗಳು ತಕರಾರು ಸಲ್ಲಿಸಿದ್ದರು.ಬಹುತೇಕ ಕಡೆ ವಿಚಾರಣೆ ನಡೆಸಿ,ತಕರಾರು ವಜಾಗೊಳಿಸಿದ ಬಳಿಕ ನಾಮಪತ್ರಗಳನ್ನು ಅಂಗೀಕರಿಸಲಾಯಿತು.

lokesh

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

3 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

4 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

5 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

5 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

5 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

6 hours ago