ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ವಿಮಾನ ಹಾರಾಟಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಕಳೆದ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ.
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ತೆರಳುವ 44 ವಿಮಾನಗಳು ರದ್ದಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ 16 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.
ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್ ಇಂದು ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಕರ್ನಾಟಕ ಬಂದ್‌ಗೆ ರಾಜ್ಯದ ವಿವಿಧ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.
ಕರ್ನಾಟಕ ಬಂದ್ ಹಿನ್ನೆಲೆ ಹೆಚ್ಚಿನ ಪ್ರಯಾಣಿಕರು ಕೊನೆ ಕ್ಷಣದಲ್ಲಿ ತಮ್ಮ ವಿಮಾನದ ಟಿಕೆಟ್‌ಗಳನ್ನು ಕ್ಯಾನ್ಸಲ್ ಮಾಡಿದ್ದಾರೆ. ಈ ಕಾರಣಕ್ಕೆ ಹಲವು ವಿಮಾನಯಾನ ಸಂಸ್ಥೆಗಳು ವಿಮಾನ ಹಾರಾಟಗಳನ್ನು ರದ್ದು ಮಾಡಿವೆ ಎಂದು ತಿಳಿದುಬಂದಿದೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…