Mysore
19
clear sky

Social Media

ಬುಧವಾರ, 17 ಡಿಸೆಂಬರ್ 2025
Light
Dark

ಕರ್ನಾಟಕ ಬಜೆಟ್‌ 2023-24| ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸಿ ಹೊಸ ಶಿಕ್ಷಣ ನೀತಿ ಜಾರಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ತೆಗೆದುಹಾಕಿ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಈಗ ಜಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುತ್ತದೆ. ಧಾರ್ಮಿಕ, ಸಾಂಸ್ಕೃತಿಕ, ಭಾಷಾವಾರು ವೈವಿಧ್ಯತೆ ಹೊಂದಿರುವ ಭಾರತದಂತಹ ದೇಶಗಳಿಗೆ ಏಕರೂಪ ಶಿಕ್ಷಣ ನೀತಿ ಸರಿಹೊಂದುವುದಿಲ್ಲ. ಕರ್ನಾಟಕದ ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕತೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಶಿಕ್ಷಣ ನೀತಿಯನ್ನು ತರಲಾಗುವುದು.

ಹೊಸ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣ ಗುಣಮಟ್ಟವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು ಯುವಜನತೆ ಜಾಗತಿಕವಾಗಿ ಪ್ರಬಲ ಸ್ಪರ್ಧೆಯೊಡ್ಡಲು ಮತ್ತು ಅರ್ಥವತ್ತಾದ ಉದ್ಯೋಗಾವಕಾಶಗಳನ್ನು ಪಡೆಯಲು ಅನುಕೂಲ ಮಾಡಿಕೊಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಾಂಗ್ರೆಸ್ ಪಕ್ಷ ಆರಂಭದಿಂದಲೂ ವಿರೋಧಿಸುತ್ತಾ ಬಂದಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!