BREAKING NEWS

ಕರ್ನಾಟಕ ಬಜೆಟ್‌ 2023-24: ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಗಳಿಗೆ ಸಿಎಂ ಕೊಕ್‌!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 14ನೇ ಬಜೆಟ್‌ ಮಂಡಿಸಿದ್ದಾರೆ. ಸುಮಾರು 3 ಲಕ್ಷ 27 ಸಾವಿರ ಕೋಟಿ ರೂ. ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅನೇಕ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಕೊಕ್‌ ನೀಡಿದ್ದಾರೆ. ಪ್ರಮುಖವಾಗಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುತ್ತಿ ವಿದ್ಯಾನಿಧಿ ಯೋಜನೆಗೆ ಅನುದಾನವನ್ನು ಸಿದ್ದರಾಮಯ್ಯ ಮುಂದುವರಿಸಿಲ್ಲ.

ಅದಲ್ಲದೇ ಬಿಎಸ್‌ ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮೀ ಯೋಜನೆಗೂ ಕೂಡ ಸಿದ್ದರಾಮಯ್ಯ ಅವರು ಅನುದಾನದ ಹಂಚಿಕೆ ಮಾಡಿಲ್ಲ. ಇನ್ನು, ಜಿಲ್ಲೆಗೊಂದು ಗೋಶಾಲೆ ಯೋಜನೆಗೂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಬ್ರೇಕ್‌ ಹಾಕಿದ್ದು, ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ. ಸಹಾಯ ಧನ ನೀಡುವ ಯೋಜನೆಯನ್ನು ಕೂಡ ಸಿದ್ದರಾಮಯ್ಯ ಕೈಬಿಟ್ಟಿದ್ದಾರೆ.

ಯಾವೆಲ್ಲಾ ಬಿಜೆಪಿ ಯೋಜನೆಗಳಿಗೆ ಸಿದ್ದು ಕೊಕ್‌?

  • ರೈತ ವಿದ್ಯಾನಿಧಿ ಯೋಜನೆ (ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ)
  • ವಿವೇಕ ಶಾಲೆ ಅಭಿವೃದ್ಧಿ ಯೋಜನೆ
  • ಹೆಣ್ಣುಮಕ್ಕಳ ಭಾಗ್ಯಲಕ್ಷ್ಮೀ ಬಾಂಡ್‌ ಯೋಜನೆ
  • ಜಿಲ್ಲೆಗೊಂದು ಗೋಶಾಲೆ ಯೋಜನೆ
  • ಎಪಿಎಂಸಿ ಕಾಯ್ದೆ ರದ್ದು
  • ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದು
  • ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ
  • ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ (ಮಹಿಳೆಯರ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ ಸಹಾಯಧನ)
  • ಭೂಸಿರಿ ಯೋಜನೆ (ರೈತರಿಗೆ 10 ಸಾವಿರ ರೂ. ಸಹಾಯಧನ)
  • ಶ್ರಮಶಕ್ತಿ ಯೋಜನೆ (ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ.)
  • ಅಗ್ನಿವೀರ್‌ ಯೋಜನೆಗೆ ಸೇರುವ ಎಸ್‌ಸಿ / ಎಸ್‌ಟಿ ಯುವಕರಿಗೆ ತರಬೇತಿ ನೀಡುವ ಯೋಜನೆ
  • ಮಕ್ಕಳ‌ ಬಸ್ – ಉಚಿತ ಬಸ್ ಯೋಜನೆ
  • ಅಂತರ್ಜಲ ಹೆಚ್ಚಿಸುವ ಜಲನಿಧಿ ಯೋಜನೆ
andolanait

Recent Posts

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

15 mins ago

ಡಿಕೆಶಿಗೆ ಮೇ.15ರೊಳಗೆ ಸಿಗಲಿದೆ ಸಿಹಿಸುದ್ದಿ: ಕುಣಿಗಲ್‌ ಶಾಸಕ ರಂಗನಾಥ್‌ ವಿಶ್ವಾಸ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

45 mins ago

ಹೀಟ್‌ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…

1 hour ago

ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…

2 hours ago

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…

2 hours ago

ಒಳಮೀಸಲಾತಿ: ಕರ್ನಾಟಕ ಮಾಡೆಲ್

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…

3 hours ago