Mysore
23
broken clouds
Light
Dark

ಕರ್ನಾಟಕ ಬಜೆಟ್‌: ಯುವನಿಧಿಗೆ ಅನುದಾನ ಘೋಷಿಸದ ಸಿದ್ದರಾಮಯ್ಯ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಬಜೆಟ್‌ನಲ್ಲಿಯೂ ಅನುದಾನಗಳನ್ನು ಘೋಷಿಸಿದೆ. ಆದರೆ, ನಿರುದ್ಯೋಗಿ ಯುವಕರಿಗೆ ಧನ ಸಹಾಯ ನೀಡುವ ‘ಯುವ ನಿಧಿ’ ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್​​ನಲ್ಲಿ ಅನುದಾನವನ್ನೇ ಘೋಷಿಸಿಲ್ಲ. ಇದು ಯೋಜನೆಯ ಅನುಷ್ಠಾನದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.

ಗೃಹಲಕ್ಷ್ಮೀ ಯೋಜನೆ ಕುರಿತು ಬಜೆಟ್​ನಲ್ಲಿ ಮುಖ್ಯಮಂತ್ರಿ ಪ್ರಸ್ತಾಪಿಸಿದರೆ, ಯುವ ನಿಧಿ ಯೋಜನೆಗೆ ಸಂಪನ್ಮೂಲ ಸಂಗ್ರಹಿಸಲು ಮತ್ತು ಹಂಚಿಕೆ ಮಾಡಲು ಸರ್ಕಾರ ಹೆಣಗಾಡುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿಗಳ ಭಾಗವಾಗಿರುವ ಈ ಯೋಜನೆಗೆ ಬಜೆಟ್​​ನಲ್ಲಿ ಅನುದಾನ ಹಂಚಿಕೆ ಮಾಡಲಾಗಿಲ್ಲ.

ಬಜೆಟ್​​ನಲ್ಲಿ ಗೃಹಲಕ್ಷ್ಮೀ ಯೋಜನೆಗೆ 30,000 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದರೆ, ಅನ್ನಭಾಗ್ಯ ಯೋಜನೆಗೆ ವಾರ್ಷಿಕ 10,000 ಕೋಟಿ ರೂಪಾಯಿ ಘೋಷಿಸಲಾಗಿದೆ. ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆಯದ 40 ಲಕ್ಷ ಬಿಪಿಎಲ್ ಫಲಾನುಭವಿಗಳಿಗೆ ನೀಡಲು 1,680 ಕೋಟಿ ಮೀಸಲಿಡಲಾಗುವುದು ಎಂದೂ ಬಜೆಟ್​​ನಲ್ಲಿ ಭರವಸೆ ನೀಡಲಾಗಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ