ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಬಜೆಟ್‌ನಲ್ಲಿಯೂ ಅನುದಾನಗಳನ್ನು ಘೋಷಿಸಿದೆ. ಆದರೆ, ನಿರುದ್ಯೋಗಿ ಯುವಕರಿಗೆ ಧನ ಸಹಾಯ ನೀಡುವ ‘ಯುವ ನಿಧಿ’ ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್ನಲ್ಲಿ ಅನುದಾನವನ್ನೇ ಘೋಷಿಸಿಲ್ಲ. ಇದು ಯೋಜನೆಯ ಅನುಷ್ಠಾನದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.
ಗೃಹಲಕ್ಷ್ಮೀ ಯೋಜನೆ ಕುರಿತು ಬಜೆಟ್ನಲ್ಲಿ ಮುಖ್ಯಮಂತ್ರಿ ಪ್ರಸ್ತಾಪಿಸಿದರೆ, ಯುವ ನಿಧಿ ಯೋಜನೆಗೆ ಸಂಪನ್ಮೂಲ ಸಂಗ್ರಹಿಸಲು ಮತ್ತು ಹಂಚಿಕೆ ಮಾಡಲು ಸರ್ಕಾರ ಹೆಣಗಾಡುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿಗಳ ಭಾಗವಾಗಿರುವ ಈ ಯೋಜನೆಗೆ ಬಜೆಟ್ನಲ್ಲಿ ಅನುದಾನ ಹಂಚಿಕೆ ಮಾಡಲಾಗಿಲ್ಲ.
ಬಜೆಟ್ನಲ್ಲಿ ಗೃಹಲಕ್ಷ್ಮೀ ಯೋಜನೆಗೆ 30,000 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದರೆ, ಅನ್ನಭಾಗ್ಯ ಯೋಜನೆಗೆ ವಾರ್ಷಿಕ 10,000 ಕೋಟಿ ರೂಪಾಯಿ ಘೋಷಿಸಲಾಗಿದೆ. ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆಯದ 40 ಲಕ್ಷ ಬಿಪಿಎಲ್ ಫಲಾನುಭವಿಗಳಿಗೆ ನೀಡಲು 1,680 ಕೋಟಿ ಮೀಸಲಿಡಲಾಗುವುದು ಎಂದೂ ಬಜೆಟ್ನಲ್ಲಿ ಭರವಸೆ ನೀಡಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…