ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಮೈಸೂರಿಗೆ

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಸೋಮವಾರ) ನಗರಕ್ಕೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ 11.15ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮೈಸೂರು ಜಿಲ್ಲಾ ಕೋವಿಡ್-‌19 ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ನಂತರ ಮಧ್ಯಾಹ್ನ 1.10ಕ್ಕೆ ನಂಜನಗೂಡಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.

× Chat with us