ಸಿಎಂ ಆಗಿ ಮೊದಲ ಬಾರಿಗೆ ಬೊಮ್ಮಾಯಿ ಮೈಸೂರು ಭೇಟಿ: ಚಾಮುಂಡಿಬೆಟ್ಟದಲ್ಲಿ ಪೂಜೆ ಸಲ್ಲಿಕೆ

ಮೈಸೂರು: ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು.

ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್ ನೀಡಿದರು.

ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ರೇಣುಕಾಚಾರ್ಯ ಮತ್ತಿತರ ಗಣ್ಯರ ಉಪಸ್ಥಿತರಿದ್ದರು.

× Chat with us