ಬೆಂಗಳೂರು : ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ಚುನಾವಣೆ ಇಂದು ನಡೆಯಲಿದೆ. ಬೆಳಗ್ಗೆ ಏಳು ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭ ಆಗಲಿದೆ.
ಸಂಜೆ ಆರು ಗಂಟೆಯವರೆಗೂ ನಿರಂತರವಾಗಿ ಮತದಾನ ಮಾಡಲು ಅವಕಾಶ ಇರಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಹಿಂದೆಂದೂ ಕಾಣದಷ್ಟು ಭದ್ರತೆ ಕೂಡ ಕೈಗೊಳ್ಳಲಾಗಿದೆ.
ಇಂದು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಸುಗಮವಾಗಿ ನಡೆದಿದೆ. ಪ್ರಧಾನಿ ಮೋದಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಸೇರಿ ಅನೇಕರು ಬನ್ನಿ ಮತ ಚಲಾಯಿಸಿ ಎಂದು ಕರೆ ನೀಡಿದ್ದಾರೆ.
ಕರ್ನಾಟಕ ಅಸೆಂಬ್ಲಿ ಚುನಾವಣೆ ವಿಶೇಷ
* ಒಟ್ಟು ಮತ ಕ್ಷೇತ್ರ – 224
* ಒಟ್ಟು ಅಭ್ಯರ್ಥಿಗಳು – 2631
* ಬಿಜೆಪಿ ಅಭ್ಯರ್ಥಿಗಳು – 224
* ಕಾಂಗ್ರೆಸ್ ಅಭ್ಯರ್ಥಿಗಳು – 223 (ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ)
* ಜೆಡಿಎಸ್ ಅಭ್ಯರ್ಥಿಗಳು – 207
* ಮತ ಕೇಂದ್ರ – 58,282
* ಮತಗಟ್ಟೆಯ ಭದ್ರತಾ ಸಿಬ್ಬಂದಿ – 84,119
* ವಿಶೇಷ ಸಿಬ್ಬಂದಿ ಸಂಖ್ಯೆ – 2,959
* ಮತದಾರರ ಸಂಖ್ಯೆ – 5.21 ಕೋಟಿ
* ಪುರುಷ ಮತದಾರರ ಸಂಖ್ಯೆ – 2.62 ಕೋಟಿ
* ಮಹಿಳಾ ಮತದಾರರ ಸಂಖ್ಯೆ – 2.59 ಕೋಟಿ
* 112 ಕ್ಷೇತ್ರಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚು
* ಫಸ್ಟ್ ಟೈಮ್ ವೋಟರ್‌ಗಳ ಸಂಖ್ಯೆ – 9.17 ಲಕ್ಷ
* 100 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ – 16,976
* ಶಾಂತಿ ಭದ್ರತೆಗೆ ನಿಯೋಜನೆಯಾದ ಪೊಲಿಸರು – 2.2 ಲಕ್ಷ
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…