ದಿಲ್ಲಿಯಲ್ಲಿ ರೈತರ ಪ್ರತಿಭಟನೆ ಬೆಂಬಲಿಸಿ 6ರಂದು ರಾಜ್ಯಾದ್ಯಂತ ರಸ್ತೆತಡೆ

 

ಮೈಸೂರು: ದಿಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ರಾಜ್ಯಾದ್ಯಂತ ರಸ್ತೆ ತಡೆ ನಡೆಸಲು ಕಬ್ಬು ಬೆಳೆಗಾರರ ಸಂಘ ತೀರ್ಮಾನಿಸಿದೆ.

ಈ ಕುರಿತು ಮಾತನಾಡಿರುವ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಅವರು, ಕೇಂದ್ರಸರಕಾರ ಪೊಲೀಸ್ ಬಲದ ಮೂಲಕ ರೈತರಿಗೆ ಸಾಕಷ್ಟು ಕಿರುಕುಳ ನೀಡುತ್ತಿದೆ.

ಇದೆ ಸರ್ಕಾರ ಚಳವಳಿ ನಿರತ ರೈತರ ಜೊತೆ ಮಾತುಕತೆಗೆ ಸಿದ್ಧ ಎನ್ನುವ ಸಂದೇಶ ನೀಡುತ್ತಿದೆ, ಚಳವಳಿ ನಡೆಯುತ್ತಿರುವ ಜಾಗದಲ್ಲಿ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಿರುವುದುರಸ್ತೆಗಳಿಗೆ ಮುಳ್ಳುತಂತಿ ಬೇಲಿ ಹಾಕಿರುವುದು, ಇಬ್ಬಗೆ ನೀತಿ ಆಗಿದೆ.

ಇದರ ವಿರುದ್ಧ ಶಾಂತಿಯುತ ಹೋರಾಟ ನಡೆಸಲು ರಾಷ್ಟ್ರ ಮಟ್ಟದ ಕಿಸಾನ್ ಸಂಯುಕ್ತ ಮೋರ್ಚಾ ಕರೆ ಮೇರೆಗೆ ರಾಜ್ಯದಲ್ಲಿಯೂ ರೈತ ದಲಿತ ಕಾರ್ಮಿಕ ಐಕ್ಯಹೋರಾಟ ನಡೆಯಲಿದೆ ಎಂದು ಹೇಳಿದ್ದಾರೆ.

6 ರಂದು ರಾಷ್ಟ್ರೀಯ ಹೆದ್ದಾರಿಗಳಲ್ಲಿ 12ಗಂಟೆಯಿಂದ 2 ಗಂಟೆ ತನಕ ರಸ್ತೆ ಬಂದ್ ಚಳುವಳಿ ನಡೆಸುವ ಮೂಲಕ ದೇಶದ ರೈತರ ಹೋರಾಟವನ್ನು ಬೆಂಬಲಿಸಬೇಕು,ಈ ಹೋರಾಟ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡುತ್ತದೆಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಪ್ರತಿಭಟನಾ ನಿರತ ರೈತರ ಮೇಲೆ ಹಾಗೂ ಈ ಹೋರಾಟದ ಬಗ್ಗೆ ಮಾಧ್ಯಮಗಳಿಗೆ ಸುದ್ದಿ ಮಾಡುತ್ತಿದ್ದ ವರದಿಗಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಖಂಡನೀಯ, ತುರ್ತುಪರಿಸ್ಥಿತಿಯ ಸಂದರ್ಭದಲ್ಲಿಯು ಸಹ ಇಂತಹ ಅತಿರೇಕದ ಕಾರ್ಯ ನಡೆದಿಲ್ಲ, ಜನತಂತ್ರ ವ್ಯವಸ್ಥೆಗೆ ಮಾಡಿದ ಅಪಮಾನ, ಕೇಂದ್ರ ಸರ್ಕಾರ ಜಾರಿ ಮಾಡಿರುವ ಕಾಯ್ದೆಗಳನ್ನು ವಾಪಸ್ ಪಡಯಬೇಕು ಕೃಷಿ ಉತ್ಪನ್ನಗಳಿಗೆ ಶಾಸನಬದ್ದ ಖಾತರಿ ಬೆಂಬಲ ಬೆಲೆ ನಿಗದಿ ಮಾಡುವ ವ್ಯವಸ್ಥೆ ಜಾರಿಯಾಗಬೇಕು, ಎಂಬುದು ನಮ್ಮ ರೈತ ಸಂಘಟನೆಗಳು ಒತ್ತಾಯ

× Chat with us