ಸರ್ಕಾರಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್! 10 ಸಾವಿರ ಶುಲ್ಕ ಹೆಚ್ಚಳ

ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆ ಮಾಡಿ ಸರ್ಕಾರ ಶಾಕ್ ನೀಡಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ದಿಢೀರ್ 10 ಸಾವಿರ ರೂಪಾಯಿ ಹೆಚ್ಚಿಸಿದೆ. ಸದ್ಯ ಖಾಸಗಿ ಇಂಜಿನಿಯರ್ ಕಾಲೇಜು ಶುಲ್ಕ ಹೆಚ್ಚಳ ಮಾಡಿಲ್ಲ. ಕಾಲೇಜುಗಳು ಶೇ.30ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಕೊರೊನಾ ಹಿನ್ನೆಲೆ ಶುಲ್ಕ ಹೆಚ್ಚಿಸಲ್ಲ ಅಂತ ಸರ್ಕಾರ ಸ್ಪಷ್ಟಪಡಿಸಿತ್ತು. ಆದರೆ ಈಗ ಸರ್ಕಾರಿ ಕಾಲೇಜುಗಳ ಶುಲ್ಕ ಹೆಚ್ಚಿಸಿದೆ.

ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 23,810 ರೂಪಾಯಿ ಪಾವತಿ ಮಾಡಬೇಕಿತ್ತು. ಈಗ 33,810 ರೂಪಾಯಿ ಶುಲ್ಕ ಪಾವತಿ ಮಾಡಬೇಕಿದೆ.

ಪ್ರಸ್ತುತ ಯಾವ ಯಾವ ಕೋಟಾದ ವಿದ್ಯಾರ್ಥಿಗಳಿಗೆ ಶುಲ್ಕ ಎಷ್ಟಿದೆ?
* ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 33,810 ರೂ.
* ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 43,810 ರೂ.
* ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 83,526 ರೂ.
* ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 90,060 ರೂ.
* ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 90,293 ರೂ.

4 ವರ್ಷಗಳ ಬಳಿಕ ಇಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳವಾಗಿದ್ದು, ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಶುಲ್ಕ ಹೆಚ್ಚಿಸಿದೆ.

× Chat with us