ರಮೇಶ್‌ ಜಾರಕಿಹೊಳಿ ಸಿ.ಡಿ ಪ್ರಕರಣ: ಯುವತಿ ತಂದೆ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ

ಬೆಂಗಳೂರು: ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ನಿಯಮಬಾಹಿರವಾಗಿ ತಮ್ಮ ಪುತ್ರಿಯ ಹೇಳಿಕೆ ದಾಖಲಿಸಿದ್ದಾರೆಂದು ಆಕ್ಷೇಪಿಸಿ ಯುವತಿಯ ತಂದೆ ರಿಟ್‌ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ನ್ಯಾ.ಎಸ್.ವಿಶ್ವಜಿತ್ ಶೆಟ್ಟಿರವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆ ಅರ್ಜಿಯನ್ನು ವಜಾಗೊಳಿಸಿದೆ.

ಯುವತಿಯ ಪರ ವಕೀಲ ಸಂಕೇತ್ ಏಣಗಿ ಹಾಜರಾಗಿ ಸಿಆರ್‌ಪಿಸಿ ಸೆಕ್ಷನ್ 164 ಅಡಿ ಹೇಳಿಕೆ ಕಾನೂನುಬದ್ಧವಾಗಿದೆ. ಯುವತಿ ವಯಸ್ಕಳಾಗಿದ್ದು, ಸ್ವ ಇಚ್ಛೆಯಿಂದ ಹೇಳಿಕೆ ನೀಡಿದ್ದಾಳೆ. ಸುಪ್ರೀಂ ಕೋರ್ಟ್ ನಿರ್ಭಯಾ ಪ್ರಕರಣದಲ್ಲಿ ನೀಡಿದ್ದ ತೀರ್ಪಿಗೆ ಅನುಗುಣವಾಗಿ ಹೇಳಿಕೆ ದಾಖಲಾಗಿದೆ. ಹೀಗಾಗಿ ಯುವತಿಯ ತಂದೆಯ ಅರ್ಜಿಯಲ್ಲಿ ಹುರುಳಿಲ್ಲವೆಂದು ವಾದಿಸಿದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಯುವತಿ ತಂದೆಯ ಅರ್ಜಿ ಹೈಕೋರ್ಟ್ ತಿರಸ್ಕರಿಸಿದೆ.

× Chat with us