ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಧಾನ ಪರಿಷತ್‌ನ ಒಟ್ಟು 5 ಸ್ಥಾನ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕ್ಷರ ಕ್ಷೇತ್ರ, ಆಗ್ನೇಯ ಶಿಕ್ಷಕ್ಷ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ.
ರಾಜಾಜಿನಗರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಕಂಡಿದ್ದ ಪುಟ್ಟಣ್ಣ ಅವರಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಇನ್ನು ಮೊನ್ನೇ ಅಷ್ಟೇ ಬಿಜೆಪಿ ತೊರೆದು ಕಾಂಂಗ್ರೆಸ್ ಸೇರಿರುವ ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಅವರ ಪತಿ ಟಿ.ಡಿ.ಶ್ರೀನಿವಾಸ್ ಅವರಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ಕ್ಷೇತ್ರ ಮತ್ತು ಅಭ್ಯರ್ಥಿ ಹೆಸರು
1.ಬೆಂಗಳೂರು ಪದವೀಧರ ಕ್ಷೇತ್ರ- ರಾಮೋಜಿಗೌಡ
2.ಬೆಂಗಳೂರು ಶಿಕ್ಷಕರ ಕ್ಷೇತ್ರ- ಪುಟ್ಟಣ್ಣ
3.ನೈಋತ್ಯ ಶಿಕ್ಷಕರ ಕ್ಷೇತ್ರ-ಕೆ.ಕೆ.ಮಂಜುನಾಥ್
4.ಆಗ್ನೇಯ ಶಿಕ್ಷಕರ ಕ್ಷೇತ್ರ-ಟಿ.ಡಿ.ಶ್ರೀನಿವಾಸ್
5.ಈಶಾನ್ಯ ಪದವೀಧರ ಕ್ಷೇತ್ರ-ಡಾ.ಚಂದ್ರಶೇಖರ ಪಾಟೀಲ್
ಪದವೀಧರ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನವೆಂಬರ್ 6 ಕೊನೆಯ ದಿನವಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪದವೀಧರರ ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ಪದವೀಧರರು ಆಸಕ್ತಿಯನ್ನು ತೋರಿಸುತ್ತಿಲ್ಲ. ನವೆಂಬರ್ 23ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. ಆಕ್ಷೇಪಣೆ ಸಲ್ಲಿಕೆ ಮಾಡಲು ಡಿಸೆಂಬರ್ 9 ಕೊನೆಯ ದಿನವಾಗಿದೆ. ಡಿಸೆಂಬರ್ 30ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಬಳಿಕವೂ ನೋಂದಣಿಗೆ ಅವಕಾಶ ಇರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…