ಡಿ.10 : ಮೇಲ್ಮನೆಯ 25 ಸ್ಥಾನಗಳಿಗೆ ಚುನಾವಣೆ

ಬೆಂಗಳೂರು: ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಡಿಸೆಂಬರ್ 10 ಕ್ಕೆ ಮತದಾನ ನಡೆಯಲಿದೆ. ಡಿ.14 ರಂದು ಫಲಿತಾಂಶ ಪ್ರಕಟವಾಗಲಿದೆ.

ಒಟ್ಟು 25 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ವಿಧಾನಪರಿಷತ್ ಸಭಾನಾಯಕ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿರೋಧಪಕ್ಷದ ನಾಯಕ ಎಸ್.ಆರ್.ಪಾಟೀಲ ಅವರ ಅವಧಿಯೂ ಮುಗಿದಿದ್ದು ಚುನಾವಣೆ ಎದುರಿಸಬೇಕಾಗಿದೆ.

ನಾಮಪತ್ರ ಸಲ್ಲಿಸಲು ನ.23 ಕೊನೆಯ ದಿನವಾಗಿದೆ. ನ.24ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ನ.26 ಕಡೆ ದಿನವಾಗಿರಲಿದೆ.

ಡಿ.10 ರಂದು ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಡಿ. 14ರಂದು ಫಲಿತಾಂಶ ಹೊರಬೀಳಿದೆ.

× Chat with us