ಎಸ್‌ಎಸ್‌ಎಲ್‌ಸಿ: ಭಾಷಾ ವಿಷಯಗಳ ಪರೀಕ್ಷೆ ಇಂದು

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಎರಡನೇ ಹಾಗೂ ಅಂತಿಮ ದಿನವಾದ ಗುರುವಾರ ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷಾ ಪರೀಕ್ಷೆಗಳು ನಡೆಯಲಿವೆ.

ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಪರೀಕ್ಷೆಗಳು ಬೆಳಗ್ಗೆ ೧೦ರಿಂದ ಮಧ್ಯಾಹ್ನ ೧.೩೦ರ ವರೆಗೆ ನಡೆಯಲಿವೆ. ಶಿಕ್ಷಣ ಇಲಾಖೆಯು ಮೊದಲ ದಿನದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ನಡೆಸಿದ್ದಾರೆ. ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಕೇಂದ್ರಗಳಲ್ಲಿ ಮತ್ತು ಅನಾರೋಗ್ಯಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ.

× Chat with us